spot_img
Friday, April 3, 2026
spot_img

ಬ್ರಹ್ಮಾವರ ಕಾಂಗ್ರೆಸ್‌ ಅಧ್ಯಕ್ಷರಾಗಿ ರಾಘವೇಂದ್ರ ಶೆಟ್ಟಿ ಕರ್ಜೆ : ಪದಗ್ರಹಣ ಸಮಾರಂಭ

ಜನಪ್ರತಿನಿಧಿ (ಬ್ರಹ್ಮಾವರ) : ಕಾಂಗ್ರೆಸ್‌ ಪಕ್ಷದಲ್ಲಿ ಹಿರಿಯ ನಾಯಕರು ಪಕ್ಷಕ್ಕಾಗಿ, ಸಮಾಜಕ್ಕಾಗಿ, ದೇಶಕ್ಕಾಗಿ ಸಾಕಷ್ಟು ದುಡಿದಿದ್ದಾರೆ. ಪಕ್ಷದ ಇತಿಹಾಸ ಗೊತ್ತಿಲ್ಲದವರು ಇಲ್ಲಸಲ್ಲದ್ದನ್ನು ಹೇಳುತ್ತಾರೆ. ನಮ್ಮ ನಾಯಕರು ಮಾಡಿದ ಕೆಲಸವನ್ನು ಬೂತ್‌ ಮಟ್ಟದಲ್ಲಿ ಕಾರ್ಯಕರ್ತರು ಜನರಿಗೆ ತಲುಪಿಸುವಂತೆ ಮಾಡಬೇಕಿದೆ. ಪಕ್ಷದ ಬಲವರ್ಧನೆಗಾಗಿ ದುಡಿಯುವವರ ನೇತೃತ್ವ ಬೂತ್‌ ಮಟ್ಟದಕ್ಕೆ ಅನಿವಾರ್ಯ ರಾಘವೇಂದ್ರ ಶೆಟ್ಟಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್‌ ಗೆ ಸಮರ್ಥ ನಾಯಕ ಎಂದು ಮಾಜಿ ಸಂಸದ ಕೆ. ಜಯಪ್ರಕಾಶ್‌ ಹೆಗ್ಡೆ ಹೇಳಿದರು.

ಬ್ರಹ್ಮಾವರದ ಬಂಟರ ಭವನದಲ್ಲಿ ನಡೆದ ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ನ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಪಕ್ಷ ಮೊದಲು, ಪಕ್ಷ ಇಲ್ಲದಿದ್ದರೆ ಸರ್ಕಾರವೇ ಇಲ್ಲ. ಆದ್ದರಿಂದ ಕಾಂಗ್ರೆಸ್ ಕುಟುಂಬದ ಪ್ರತಿಯೊಬ್ಬರು ತಮ್ಮ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ ಪಕ್ಷ ಸಂಘಟನೆ ಮಾಡಬೇಕು. ಸರ್ಕಾರದ ಎಲ್ಲಾ ಸೌಲಭ್ಯವನ್ನು ಕೇವಲ ಅಧಿಕಾರಿಗಳಿಂದ ತಲುಪಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸರಕಾರದ ಸೌಲಭ್ಯ ತಲುಪಿಸಲು ಪ್ರಯತ್ನಿಸಬೇಕು ಎಂದು ಅಭಿಪ್ರಾಯ ಪಟ್ಟರು.

ಕಾಂಗ್ರೆಸ್‌ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ಮಾತನಾಡಿ, ಕಾಂಗ್ರೆಸ್‌ ನ ಪಂಚ ಗ್ಯಾರೆಂಟಿ ಯೋಜನೆಗಳ ಬಗ್ಗೆ ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರ ಕೊಟ್ಟ ಯೋಜನೆಗಳ ಬಗ್ಗೆ ಜನರಿಗೆ ಕಾರ್ಯಕರ್ತರು ತಿಳಿಸಬೇಕು. ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಒಂದೇ ಒಂದು ಎಂಎಲ್‌ಎ ಇಲ್ಲ. ಮುಂದೆ ಗೆಲುವು ನಮ್ಮದಾಗಬೇಕು. ಅದಕ್ಕೆ ಎಲ್ಲಾ ಕಾರ್ಯಕರ್ತರು ಶ್ರಮಿಸಬೇಕು ಎಂದು ಹೇಳಿದರು.

ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಮಾತನಾಡಿ ಯುವ ನಾಯಕ ಬೇಕೆಂದು ರಾಘವೇಂದ್ರ ಶೆಟ್ಟಿಯವರನ್ನು ನೇಮಿಸಲಾಗಿದೆ. ನಾವು ಮುಂದಿನ ಚುನಾವಣೆಗೆ ೨೦೦೦೦ ಸಾವಿರ ಯುವ ಕಾರ್ಯಕರ್ತರನ್ನು ನೇಮಿಸಿಕೊಳ್ಳಲಿದ್ದೇವೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಟ್ಟ ಗ್ಯಾರೆಂಟಿ ಯೋಜನೆಗಳಿಂದ ಮಹಿಳೆಯರಿಗೆ ಅನುಕೂಲವಾಗಿದೆ. ವಿರೋಧ ಪಕ್ಷದವರು ಕರ್ನಾಟಕ ದಿವಾಳಿಯಾಗುತ್ತದೆ ಎಂದಿದ್ದರು. ಅದು ಸುಳ್ಳಾಗಿದೆ ಎಂದವರು ಹೇಳಿದರು.

ಸಮಾರಂಭದಲ್ಲಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ ದಿನಕರ ಹೇರೂರು ನೂತನ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ ಇವರಿಗೆ ಅಧಿಕಾರ ಹಸ್ತಾಂತರಿಸಿದರು.

ಅಧಿಕಾರ ಸ್ವೀಕರಿಸಿದ ರಾಘವೇಂದ್ರ ಶೆಟ್ಟಿ ಮಾತನಾಡಿ ಬ್ರಹ್ಮಾವರ ಬ್ಲಾಕ್‌ನ ಗ್ರಾಮಮಟ್ಟದಲ್ಲಿ ಪಕ್ಷ ಬೆಳೆಸದೇ ಇದ್ದಲ್ಲಿ ನಮಗೆ ಗೆಲುವು ಅಸಾಧ್ಯ. ಪಂಚಾಯತ್‌ಮಟ್ಟದಲ್ಲಿ ಬಲಿಷ್ಠ ತಂಡ ಕಟ್ಟುವುದೇ ನಮ್ಮ ಗುರಿ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು ಪದಗ್ರಹಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬ್ರಹ್ಮಾವರ ಬ್ಲಾಕ್ ಮಾಜಿ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಹಾರಾಡಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಮುಖಂಡರುಗಳಾದ ಉಡುಪಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಲಾವಣ್ಯ ಬಲ್ಲಾಳ್, ಕೆ.ಪಿ.ಸಿ.ಸಿ ಉಪಾಧ್ಯಕ್ಷ ಎಂ.ಎ.ಗಫೂರ್, ಸರಳ ಕಾಂಚನ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಉಡುಪಿ ಬ್ಲಾಕ್ ಅಧ್ಯಕ್ಷ ರಮೇಶ್ ಕಾಂಚನ್, ಪ್ರಖ್ಯಾತ್ ಶೆಟ್ಟಿ, ಇಬ್ರಾಹಿಂ ಸಾಹೇಬ್ ಹಂಗಾರಕಟ್ಟೆ, ವೆರೋನಿಕಾ ಕರ್ನೇಲಿಯೋ, ಗೀತಾ ವಾಗ್ಲೆ, ಸುಕುಮಾರ ಕಾಪು, ಸಂತೋಷ ಕುಲಾಲ್ ಕಾಪು, ಕೋಟ ಬ್ಲಾಕ್ ಶಂಕರ ಕುಂದರ್ , ಹರಿಪ್ರಸಾದ್ ರೈ, ಕಿರಣ್ ಹೆಗ್ಡೆ, ಸುರೇಶ್ ಶೆಟ್ಟಿ, ಅಶೋಕ್ ಕುಮಾರ್ ಶೆಟ್ಟಿ ಮೈರ್ಮಾಡಿ, ಕೃಷ್ಣ ಶೆಟ್ಟಿ ಬಜಗೋಳಿ, ರಮೇಶ್ ಶೆಟ್ಟಿ ಹಾವಂಜೆ, ಭುಜಂಗ ಶೆಟ್ಟಿ ಬ್ರಹ್ಮಾವರ, ಇರ್ಮಾಡಿ ಸುಧಾಕರ ಶೆಟ್ಟಿ, ಮಲ್ಲಿಕಾ ಬಾಲಕೃಷ್ಣ ಪೂಜಾರಿ, ಗೋಪಿ.ಕೆ.ನಾಯ್ಕ್ ಸೇರಿ ಪ್ರಮುಖರು ಭಾಗವಹಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!