spot_img
Wednesday, April 1, 2026
spot_img

ರಾಜ್ಯ ಕೆಎಂಎಫ್ ನಿರ್ದೇಶಕರಾಗಿ  ಬೆಳಪು ದೇವಿಪ್ರಸಾದ್ ಶೆಟ್ಟಿ ಆಯ್ಕೆ

ಮಂಗಳೂರು: ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಮಹಾಮಂಡಳ ನಿ., ಬೆಂಗಳೂರು ಇದರ ನಿರ್ದೇಶಕರಾಗಿ  ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಇವರು ಆಯ್ಕೆಗೊಂಡಿದ್ದಾರೆ.

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿರ್ದೇಶಕರಾಗಿರುವ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಇವರನ್ನು ಮಂಗಳವಾರ ನಡೆದ ಒಕ್ಕೂಟದ ನೂತನ ಆಡಳಿತ ಮಂಡಳಿ ಸಭೆಯಲ್ಲಿ ರಾಜ್ಯ ಕೆಎಂಎಫ್ ನಿರ್ದೇಶಕರನ್ನಾಗಿ ಆಯ್ಕೆ ಮಾಡಲಾಯಿತು. ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರ ಶಿಫಾರಸ್ಸಿನ ಮೂಲಕ ಈ ಆಯ್ಕೆ ನಡೆದಿದೆ.

ಈ ಮೊದಲು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಯಲ್ಲಿ ಡಾ..ಎಂ. ಎನ್. ರಾಜೇಂದ್ರಕುಮಾರ್ ನೇತೃತ್ವದ ಹೈನುಗಾರರ ಬಳಗದ 13 ಮಂದಿ ನಿರ್ದೇಶಕರು ಆಯ್ಕೆಗೊಂಡಿದ್ದು, ಬಳಿಕ ಡಾ.ಎಂಎನ್ ಆರ್ ಬಳಗದ  ರವಿರಾಜ ಹೆಗ್ಡೆ, ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಉದಯ ಎಸ್. ಕೋಟ್ಯಾನ್ ಅವಿರೋಧವಾಗಿ ಆಯ್ಕೆಗೊಂಡಿದ್ದರು. ಇದೀಗ ದೇವಿಪ್ರಸಾದ್ ಶೆಟ್ಟಿಯವರು ಕೂಡ ರಾಜೇಂದ್ರ ಕುಮಾರ್ ಅವರ ಶಿಫಾರಸ್ಸಿನ ಮೂಲಕ ರಾಜ್ಯ ಕೆಎಂಎಫ್ ನಿರ್ದೇಶಕರಾಗಿ ಆಯ್ಕೆಗೊಂಡಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ,  ಬೆಂಗಳೂರು ಹಾಗೂ ಎಸ್ ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರಾಗಿರುವ ದೇವಿಪ್ರಸಾದ್ ಶೆಟ್ಟಿ ಬೆಳಪು ಇವರು ಬೆಳಪು ವ್ಯವಸಾಯ ಸೇವಾ ಸಹಕಾರ ಸಂಘ, ಬೆಳಪು ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿಯೂ ಇವರು ಕಾರ್ಯನಿರ್ವಹಿಸುತ್ತಿದ್ದಾರೆ.

ರಾಜ್ಯ ಕೆಎಂಎಫ್ ನಿರ್ದೇಶಕರಾಗಿ ಆಯ್ಕೆಗೊಂಡ ದೇವಿಪ್ರಸಾದ್ ಶೆಟ್ಟಿ ಅವರನ್ನು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ರವಿರಾಜ್ ಹೆಗ್ಡೆ ಅವರು ಆಡಳಿತ ಮಂಡಳಿ ಸಭೆಯಲ್ಲಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ಉದಯ ಎಸ್. ಕೋಟ್ಯಾನ್, ನಿರ್ದೇಶಕರುಗಳಾದ  ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಸುಧಾಕರ್ ಶೆಟ್ಟಿ ,  ಎನ್. ಮಂಜಯ್ಯ ಶೆಟ್ಟಿ, ಕೆ. ಶಿವಮೂರ್ತಿ, ಸುಚರಿತ ಶೆಟ್ಟಿ, ನಂದರಾಮ್ ರೈ, ಎಸ್. ಬಿ. ಜಯರಾಮ ರೈ, ಚಂದ್ರಶೇಖರ ರಾವ್, ಎಚ್. ಪ್ರಭಾಕರ್, ಮಮತಾ ಆರ್. ಶೆಟ್ಟಿ,. ಬಿ. ಸುಧಾಕರ್ ರೈ, ಭರತ್ ಎನ್, ಸವಿತಾ ಎನ್. ಶೆಟ್ಟಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!