spot_img
Tuesday, March 17, 2026
spot_img

ರಾಜ್ಯದ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ಡಾ. ಎಂ.ಎ. ಸಲೀಂ ನೇಮಕ

ಜನಪ್ರತಿನಿಧಿ (ಬೆಂಗಳೂರು) : ರಾಜ್ಯದ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ, ಬೆಂಗಳೂರಿನ ಚಿಕ್ಕಬಾಣಾವರದ ಕನ್ನಡಿಗ ಎಂ.ಎ. ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಇಂದು(ಬುಧವಾರ) ಆದೇಶ ಹೊರಡಿಸಿದೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಕಳೆದ ಏಪ್ರಿಲ್ 30 ರಂದು ನಿವೃತ್ತಿಯಾಗಿದ್ದು, ಅವರ ಸೇವಾವಧಿಯನ್ನು ಮೇ 21ರ ವರೆಗೆ ವಿಸ್ತರಣೆ ಮಾಡಲಾಗಿತ್ತು.

ಇಂದು ಅಲೋಕ್ ಮೋಹನ್ ಅವರಿಂದ ತೆರವಾದ ಸ್ಥಾನಕ್ಕೆ, ಸೇವಾ ಹಿರಿತನ ಆಧಾರದ ಮೇಲೆ ಸಿಐಡಿ ಡಿಜಿಪಿ ಡಾ.ಎಂ.ಎ. ಸಲೀಂ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಪ್ರಭಾರ ಡಿಜಿ-ಐಜಿಪಿಯಾಗಿ ನೇಮಕ ಮಾಡಲಾಗಿದೆ.

1966ರ ಜೂನ್ 25ರಂದು ಬೆಂಗಳೂರಿನ ಚಿಕ್ಕಬಾಣಾವರದಲ್ಲಿ ಜನಿಸಿದ ಡಾ.ಎಂ.ಎ.ಸಲೀಂ ಅವರು, 1989ರಲ್ಲಿ ವಾಣಿಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

1993ರಲ್ಲಿ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಪೊಲೀಸ್ ನಿರ್ವಹಣೆ ಬಗ್ಗೆ ಸ್ನಾತಕೋತ್ತರ ಪದವಿ ಪಡೆದ ಸಲೀಂ ಅವರು 2010ರಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಟ್ರಾಫಿಕ್ ಮ್ಯಾನೇಜ್ಮೆಂಟ್ ವಿಷಯದಲ್ಲಿ ಡಾಕ್ಟರೇಟ್ ಪದವಿಯನ್ನುಪಡೆದುಕೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!