spot_img
Tuesday, March 17, 2026
spot_img

ರಾಜಕಾಲುವೆ ಒತ್ತುವರಿ ಎಷ್ಟೇ ಪ್ರಭಾವಿಗಳು ಮಾಡಿದ್ದರೂ, ಮುಲಾಜಿಲ್ಲದೆ ತೆರವುಗೊಳಿಸುವಂತೆ ಸೂಚನೆ ನೀಡಿದ ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ನಗರದಲ್ಲಿ ರಾಜಕಾಲುವೆ ಒತ್ತುವರಿಯನ್ನು ಎಷ್ಟೇ ಪ್ರಭಾವಿಗಳು ಮಾಡಿದ್ದರೂ, ಅದನ್ನು ಮುಲಾಜಿಲ್ಲದೆ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಬಳಿಕ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಬೆಂಗಳೂರಿನಲ್ಲಿ ನೆರೆ ನೀರು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ರಾಜಕಾಲುವೆ ಅಭಿವೃದ್ದಿಯಂತಹ ಮೂಲಸೌಕರ್ಯ ಅಭಿವೃದ್ಧಿಗೆ ನಮ್ಮ ಸರ್ಕಾರ ಯೋಜನೆಗಳನ್ನು ರೂಪಿಸಿ ಕಾಮಗಾರಿಗಳನ್ನು ಕೈಗೊಂಡಿದೆ. ರಾಜಕಾಲುವೆ ಸುಮಾರು 860 ಕಿಮೀ ಇದೆ. 491 ಕಿಮೀ ರಾಜಕಾಲುವೆಯಲ್ಲಿ ಲೈನಿಂಗ್ ಕೆಲಸ ಮುಗಿದಿದೆ. 125 ಕಿಮೀ ರಾಜಕಾಲುವೆ ಕಾಮಗಾರಿ ನಡೆಯುತ್ತಿದ್ದು, ಮೂರು ತಿಂಗಳ ಒಳಗಾಗಿ ಪೂರ್ಣಗೊಳಿಸಲಾಗುವುದು. ಇನ್ನುಳಿದ 173 ಕಿಮೀ ರಾಜಕಾಲುವೆ ಅಭಿವೃದ್ಧಿಗೆ ವಿಶ್ವ ಬ್ಯಾಂಕ್‌ನಿಂದ 2 ಸಾವಿರ ಕೋಟಿ ರೂ. ಸಾಲ ಪಡೆದು ಕಾಮಗಾರಿ ಕೈಗೊಂಡಿದ್ದೇವೆ. ಇದರ ಟೆಂಡರ್ ಮುಗಿದಿದ್ದು, ಮೂರು ವರ್ಷಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಲು ತಿಳಿಸಿರುವುದಾಗಿ ಅವರು ಹೇಳಿದರು.

ಮನೆಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿರುವ ಎಲ್ಲಾ ಸಂತ್ರಸ್ತರಿಗೆ ತಕ್ಷಣ ಪರಿಹಾರ ಒದಗಿಸಲಾಗುವುದು. ಹಾನಿ ಕುರಿತು ಕೂಡಲೇ ಸಮೀಕ್ಷೆ ನಡೆಸಿ ಪರಿಹಾರ ಒದಗಿಸಲು ಸೂಚನೆ ನೀಡಿದ್ದೇನೆ. ತಗ್ಗು ಪ್ರದೇಶಗಳಲ್ಲಿ ಬೇಸ್‌ಮೆಂಟ್ ಗಳಲ್ಲಿ ನಿರ್ಮಾಣಕ್ಕೆ ಇನ್ನು ಮುಂದೆ ಅನುಮತಿ ನೀಡದಂತೆ ಸಂಬಂಧಿತ ಪ್ರಾಧಿಕಾರಗಳಿಗೆ ಸೂಚನೆ ನೀಡಿದ್ದೇನೆ. 166 ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ತಗ್ಗು ಪ್ರದೇಶಗಳೆಂದು ಗುರುತಿಸಿ ಮುಂಜಾಗರೂಕತಾ ಕ್ರಮ ಕೈಗೊಳ್ಳಲಾಗಿದೆ ಎಂದರು.

ಮಾನ್ಯತಾ ಟೆಕ್ ಪಾರ್ಕ್ ಬಳಿ ರಾಜಕಾಲುವೆ ಪರಿಶೀಲನೆ ನಡೆಸಿದ್ದು ಅಲ್ಲಿ ರಾಜಕಾಲುವೆ ಒತ್ತುವರಿ ಗಮನಿಸಲಾಗಿದೆ. ಒತ್ತುವರಿಯನ್ನು ಕೂಡಲೇ ತೆರವುಗೊಳಿಸಲು ಸೂಚನೆ ನೀಡಿದ್ದೇನೆ. ಮಾನ್ಯತಾ ಟೆಕ್ ಪಾರ್ಕ್ ಸಿಇಒ ಅವರು ಸ್ವಂತ ರಸ್ತೆಯಲ್ಲಿ 90ದಿನಗಳಲ್ಲಿ ಚರಂಡಿ ನಿರ್ಮಿಸಿ ನೀರು ಸರಾಗವಾಗಿ ಹರಿಯಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಹೆಚ್‌ಬಿಆರ್ ಬಡಾವಣೆಯ ಐದನೇ ಹಂತದ ರಾಜಕಾಲುವೆ ಸಮಸ್ಯೆಯಿದ್ದು, ಅಲ್ಲಿನ ಮನೆಗಳಿಗೆ ನೀರು ನುಗ್ಗಿದೆ. ರಾಜಕಾಲುವೆಗೆ ಅಲ್ಲಿ ತಡೆಗೋಡೆ ನಿರ್ಮಾಣವಾಗುತ್ತಿದೆ. ಈ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ ನೀಡಿದ್ದೇವೆ. ಚರಂಡಿಗೆ ಕಸ ಹಾಕುವವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದೇವೆ. ಸಾಯಿ ಲೇಔಟ್‌ಗೆ ಭೇಟಿ ನೀಡಿದ್ದು, ಅದು ರಾಜಕಾಲುವೆಗಿಂತ ತಗ್ಗು ಪ್ರದೇಶದಲ್ಲಿದೆ. ರೈಲ್ವೆ ಸೇತುವೆ ಬಳಿ ವೆಂಟ್ ಕಿರಿದಾಗಿದ್ದು, ಅದನ್ನು ಅಗಲಗೊಳಿಸಿದರೆ ಮಾತ್ರ ಸಮಸ್ಯೆ ಪರಿಹಾರ ಸಾಧ್ಯ. ಅನೇಕ ವರ್ಷದಿಂದ ಈ ಸಮಸ್ಯೆಯಿದೆ. ವೆಂಟ್‌ಗಳ ನಿರ್ಮಾಣ ಮತ್ತು  ಅಗಲಗೊಳಿಸಲು ಈಗಾಗಲೇ ಅನುದಾನ ಒದಗಿಸಲಾಗಿದ್ದು, ಕಾಮಗಾರಿ ಆದಷ್ಟು ಬೇಗನೆ ಪೂರ್ಣಗೊಳಿಸಲು ಸೂಚನೆ ನೀಡಿರುವುದಾಗಿ ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ 2022ರಲ್ಲಿ 299ಮಿಮೀ ಮಳೆಯಾಗಿತ್ತು. 10 ವರ್ಷಗಳಲ್ಲಿ ಇದು ಎರಡನೇ ಬಾರಿ ಹೆಚ್ಚಿನ ಮಳೆಯಾಗಿದೆ. ಮೇ. 19 ರಂದು ಮಧ್ಯರಾತ್ರಿ 132 ಮಿಮೀ ಮಳೆ ದಾಖಲಾಗಿದೆ ಎಂದಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!