spot_img
Sunday, June 22, 2025
spot_img

ಮೈಸೂರು ಸ್ಯಾಂಡಲ್ ಸೋಪ್ ನ ಅಧಿಕೃತ ರಾಯಭಾರಿಯಾಗಿ ತಮನ್ನಾ ಭಾಟಿಯಾ ನೇಮಕ | ಸಂಭಾವಣೆ ಎಷ್ಟು ಗೊತ್ತಾ ?

ಜನಪ್ರತಿನಿಧಿ (ಬೆಂಗಳೂರು) : ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ಮೈಸೂರು ಸ್ಯಾಂಡಲ್ ಸೋಪ್ ನ ಅಧಿಕೃತ ರಾಯಭಾರಿಯನ್ನಾಗಿ 2 ವರ್ಷಗಳ ಅವಧಿಗೆ ನೇಮಸಿಕೊಳ್ಳಲಾಗಿದೆ.

ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ ಲಿಮಿಟೆಡ್ ನಿಂದ ಈ ಪ್ರಕಟಣೆ ಹೊರಬಿದ್ದಿದ್ದು, ಮೈಸೂರು ಸ್ಯಾಂಡಲ್ ಹಾಗೂ ಇತರ ಉತ್ಪನ್ನಗಳಿಗೆ 2 ವರ್ಷಗಳ ಅವಧಿಗೆ ನೇಮಸಿಕೊಳ್ಳಲಾಗಿದೆ ಎಂದು ವಿವರಿಸಲಾಗಿದೆ.

ಸಂಭಾವನೆ 6 ಕೋಟಿ!

ರಾಯಭಾರಿಯಾಗಿ ನೇಮಕ ಮಾಡಿಕೊಂಡಿರುವುದಕ್ಕಾಗಿ ತಮನ್ನಾ ಭಾಟಿಯಾ ಅವರಿಗೆ 6.2 ಕೋಟಿ ರೂಪಾಯಿ ಸಂಭಾವನೆ ನೀಡಲಾಗಿದ್ದು, ಇಷ್ಟೊಂದು ದೊಡ್ಡ ಮೊತ್ತ ನೀಡಿ ನೇಮಕ ಮಾಡಿಕೊಳ್ಳುವ ಅಗತ್ಯವಿತ್ತೇ ಎಂಬ ಪ್ರಶ್ನೆ ಈಗ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಕನ್ನಡಿಗ ನಟಿ ಯಾರೂ ಇಲ್ಲವೇ ?

ತಮನ್ನಾ ಭಾಟಿಯಾ ದಕ್ಷಿಣ ಭಾರತ ಚಿತ್ರರಂಗ ಸೇರಿದಂತೆ ಬಾಲಿವುಡ್ ನಲ್ಲಿ ಕೂಡ ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ. ಜೊತೆಗೆ ಗ್ಲಾಮರಸ್ ಕೂಡ ಆಗಿ ಕಾಣುತ್ತಾರೆ. ಇದನ್ನು ನೋಡಿ ಮಾರುಕಟ್ಟೆ ಲೆಕ್ಕಾಚಾರ ಹಾಕಿ ಕರ್ನಾಟಕ ಸರ್ಕಾರ ಅವರನ್ನು ಸಂಪರ್ಕಿಸಿ ನೇಮಕ ಮಾಡಿಕೊಂಡಿರಬಹುದು. ರಾಯಭಾರಿಯಾಗಿ ನೇಮಿಸಿಕೊಳ್ಳುವುದಕ್ಕೆ ಕನ್ನಡದ ನಟ/ನಟಿಯರು ಯಾರೂ ಸಿಗಲಿಲ್ಲವೇ ಎಂದು ಸಹ ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.

Related Articles

Stay Connected

21,961FansLike
3,912FollowersFollow
22,400SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!