spot_img
Friday, March 6, 2026
spot_img

ಅಗಲಿದ ವೃತ್ತ ನಿರೀಕ್ಷಕ ನಂಜಪ್ಪ ಅವರಿಗೆ ಕುಂದಾಪುರದಲ್ಲಿ ಅಂತಿಮ ಗೌರವ

ಕುಂದಾಪುರ : ಕುಂದಾಪುರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ನಂಜಪ್ಪ ಎನ್. ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನರಾಗಿದ್ದು, ಗುರುವಾರ ಬೆಳಿಗ್ಗೆ ಕುಂದಾಪುರ ವೃತ್ತ ನಿರೀಕ್ಷಕರ ಕಚೇರಿ ಆವರಣದಲ್ಲಿ ಅಂತಿಮ ಗೌರವ ಸಲ್ಲಿಸಲಾಯಿತು.

ಶಾಸಕ ಕಿರಣ್ ಕೊಡ್ಗಿ, ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಪುರಸಭಾಧ್ಯಕ್ಷ ಮೋಹನ್ ದಾಸ್ ಶೆಣೈ, ಕಾಂಗ್ರೆಸ್ ಮುಖಂಡ ದಿನೇಶ್ ಹೆಗ್ಡೆ ಮೊಳಹಳ್ಳಿ ಸಹಿತ ಗಣ್ಯರು ಅಂತಿಮ ದರ್ಶನ ಪಡೆದರು.

ಸಕಲ ಸರಕಾರಿ ಗೌರವ ಸಲ್ಲಿಸಲಾಯಿತು. ಪೊಲೀಸರಿಂದ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಲಾಯಿತು.

ಕುಂದಾಪುರ ಡಿವೈ‌ಎಸ್ಪಿ ಹೆಚ್. ಡಿ. ಕುಲಕರ್ಣಿ, ಕುಂದಾಪುರ ಉಪ ವಿಭಾಗದ ವಿವಿಧ ವೃತ್ತ ನಿರೀಕ್ಷಕರು, ಎಲ್ಲ ಠಾಣೆಗಳ ಉಪನಿರೀಕ್ಷಕರು, ಪೊಲೀಸರು, ಸಾರ್ವಜನಿಕರಿಂದ ಅಂತಿಮ ನಮನ ಸಲ್ಲಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!