spot_img
Thursday, March 5, 2026
spot_img

ಬ್ರಹ್ಮಾವರ : ಬಾರ್ಕೂರು ಕಾಲೇಜಿನಲ್ಲಿ ಡಿಜಿಟಲ್‌ ಗ್ರಂಥಾಲಯ ಉದ್ಘಾಟನೆ

ಜನಪ್ರತಿನಿಧಿ (ಬಾರ್ಕೂರು ) : ಬಾರ್ಕೂರು ರುಕ್ಮಿಣಿ ಶೇಡ್ತಿ ಸ್ಮಾರಕ ನ್ಯಾಷನಲ್‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಗ್ರಂಥಾಲಯ ವಿಭಾಗ ಮತ್ತು ಐಕ್ಯುಎಸಿ ಸಂಯಕ್ತ ಆಶ್ರಯದಲ್ಲಿ ಡಿಜಿಟಲ್‌ ಗ್ರಂಥಾಲಯ ಬಗ್ಗೆ ವಿಶೇಷ ಉಪನ್ಯಾಸ, ಡಿಜಿಟಲ್‌ ಗ್ರಂಥಾಲಯ ಉದ್ಘಾಟನಾ ಸಮಾರಂಭ ನಡೆಯಿತು.

ಪ್ರಾಂಶುಪಾಲ ಪ್ರೊ. ಭಾಸ್ಕರ ಶೆಟ್ಟಿ ಸಳ್ವಾಡಿ ಮಾತನಾಡಿ, ಡಿಜಿಟಲ್‌ ಗ್ರಂಥಾಲಯ ಸೌಲಭ್ಯದಿಂದ ವಿದ್ಯಾರ್ಥಿಗಳಿಗೆ ಅವರ ಅನುಕೂಲಕ್ಕೆ ತಕ್ಕಂತೆ ಪುಸ್ತಕಗಳನ್ನು ಓದಲು ಅವಕಾಶವಿದೆ. ಇದರಿಂದ ಹೆಚ್ಚಿನ ಅಧ್ಯಯನ ನಡೆಸಲು ಉತ್ತಮ ವೇದಿಕೆ ಕಲ್ಪಿಸಿದಂತಾಗುತ್ತದೆ. ವಿದ್ಯಾರ್ಥಿಗಳು ಇದನ್ನು ಸದುಪಯೋಗ ಮಾಡಿಕೊಂಡು ಶೈಕ್ಷಣಿಕೆ ಸಾಧನೆ ಮಾಡಬೇಕು ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿ ಉಡುಪಿ ಅಜ್ಜರಕಾಡು ಜಿ. ಶಂಕರ್‌ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಗ್ರಂಥಪಾಲಕ ವೆಂಕಟೇಶ್‌ ಮಾತನಾಡಿ, ವಿದ್ಯಾರ್ಥಿಗಳು ಜ್ಞಾನ ಹೆಚ್ಚಿಸಿಕೊಳ್ಳಲು ಗ್ರಂಥಾಲಯವನ್ನು ಬಳಸಿಕೊಂಡು ಗುರಿ ಸಾಧಿಸಿ ಎಂದರು.

ಮಂಗಳೂರಿನ ಎಡ್ವೈಸ್‌ ಸಂಸ್ಥೆಯ ಮಾಲೀಕ ಧೀರಜ್‌ ಎಸ್.‌ ಡಿಜಿಟಲ್‌ ಗ್ರಂಥಾಲಯದ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಕಾಲೇಜಿನ ಗ್ರಂಥಪಾಲಕ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಹರೀಶ್‌ ಸಿ.ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಮಾಜಕಾರ್ಯ ವಿಭಾಗ ಮುಖ್ಯಸ್ಥೆ ಹೇಮಾ ಎಸ್.‌ ಕೊಡುದ್‌, ದೈಹಿಕ ಶಿಕ್ಷಣ ನಿರ್ದೇಶಕಿ ಸುಮತಿ, ಗ್ರಂಥಾಲಯ ಸಹಾಯಕ ಮಂಜುನಾಥ ಭಾಗವಹಿಸಿದ್ದರು. ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಪಾಪಣ್ಣ ಎನ್ ನಿರೂಪಿಸದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!