spot_img
Tuesday, March 31, 2026
spot_img

ರಾಜ್ಯದಲ್ಲಿ ಒಟ್ಟು 35 ಮಂದಿಗೆ ಕೋವಿಡ್ ಪಾಸಿಟಿವ್ | ಆತಂಕ ಪಡುವ ಅಗತ್ಯವಿಲ್ಲ : ಸಚಿವ ಗುಂಡೂರಾವ್‌

ಜನಪ್ರತಿನಿಧಿ (ಬೆಂಗಳೂರು) : ರಾಜ್ಯದಲ್ಲಿ ಕೋವಿಡ್ ಸೋಂಕಿನ ಆತಂಕ ಹೆಚ್ಚುತ್ತಿದ್ದು, ಕಳೆದ ಒಂದು ವಾರದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಕೊಂಚ ಏರಿಕೆಯಾಗಿದೆ. ಒಟ್ಟು 35 ಜನರಲ್ಲಿ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದ್ದು, ಬೆಂಗಳೂರಿನಲ್ಲಿಯೇ 32 ಜನರಲ್ಲಿ ಕೋವಿಡ್‌ ಸೋಂಕು ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು(ಶನಿವಾರ) ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರು, ಕೋವಿಡ್ ಸೋಂಕು ಮತ್ತೆ ಕಾಣಿಸಿಕೊಳ್ಳುತ್ತಿದೆ ಎಂದು ಜನರು ಆತಂಕ ಪಡುವ ಅಗತ್ಯವಿಲ್ಲ.‌ ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಅಗತ್ಯ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ ಎಂದರು.

ಕೋವಿಡ್ ತಾಂತ್ರಿಕ ಸಮಿತಿ ನಿನ್ನೆ(ಶುಕ್ರವಾರ) ಸಭೆ ನಡೆಸಿ ರಾಜ್ಯದಲ್ಲಿ ಕಂಡುಬಂದಿರುವ ಕೋವಿಡ್ ಪಾಸಿಟಿವ್‌ ಪ್ರಕರಣಗಳ ಬಗ್ಗೆ ಚರ್ಚೆ ನಡೆಸಿದೆ. ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದೇವೆ. ಕೇಂದ್ರ ಸರ್ಕಾರದ ಜೊತೆ ಕೂಡ ಸಂಪರ್ಕದಲ್ಲಿದ್ದೇವೆ. ದೇಶದಲ್ಲಿ ಒಟ್ಟು 257 ಕೋವಿಡ್‌ ಪಾಸಿಟಿವ್ ಪ್ರಕರಣ ದಾಖಲಾಗಿವೆ. ಕೋವಿಡ್ ಪಾಸಿಟಿವ್ ಹೊಂದಿದವರಿಗೆ ಮೈಲ್ಡ್ ಲಕ್ಷಣಗಳು ಇದೆ. ಬಿಟ್ಟರೆ ಗಂಭೀರವಾದ ಸಮಸ್ಯೆಗಳು ಕಂಡುಬಂದಿಲ್ಲ. ಉಸಿರಾಟದ ತೊಂದರೆ ಇರುವವರಿಗೆ, SARI ಪ್ರಕರಣಗಳಲ್ಲಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಲು ಸೂಚನೆ ನೀಡಲಾಗಿದೆ. ಉಸಿರಾಟ ಹಾಗೂ ಹೃದಯಸಂಬಂಧಿ ಕಾಯಿಲೆ ಇರುವವರು ಅಡ್ಮಿಟ್ ಅಗಿರುವ ಆಸ್ಪತ್ರೆಗಳಲ್ಲಿ ಸ್ಯಾಂಪಲ್ಸ್ ಕಲೆಕ್ಟ್ ಮಾಡಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ನಡೆಸುವಂತೆ ಸೂಚಿಸಲಾಗಿದೆ ಎಂದು ದಿನೇಶ್ ಗುಂಡೂರಾವ್ ಅವರು ಹೇಳಿದರು.

ಬಾಣಂತಿಯರು, ಜನ ಹೆಚ್ಚಿರುವ ಕಡೆ ಮಾಸ್ಕ್ ಧರಿಸಲು ಸಲಹೆ ನೀಡಲಾಗಿದೆ. ಯಾರು ಭಯ ಪಡುವ ಅಗತ್ಯವಿಲ್ಲ. ಕೋವಿಡ್ ಬಂದಿದೆ ಎಂದು ಆತಂಕ ಪಡುವ ಅಗತ್ಯವಿಲ್ಲ. ಆರೋಗ್ಯ ಇಲಾಖೆಯ ಮಾರ್ಗಸೂಚೊಯಂತೆ ಮುಂಜಾಗ್ರತೆ ವಹಿಸಿದರೆ ಸಾಕು. ತಕ್ಷಣಕ್ಕೆ ಮಾಸ್ಕ್ ಎಲ್ಲರಿಗೂ ಕಡ್ಡಾಯ ಮಾಡಿಲ್ಲ. ಬಾಣಂತಿಯರು, ಗರ್ಭಿಣಿಯರು ಧರಿಸಬೇಕು ಎಂದು ಸೂಚಿಸಲಾಗಿದೆ. ಸ್ವಚ್ಛತೆ ಕಾಪಾಡಿಕೊಂಡು ಸ್ಯಾನಿಟೈಸರ್ ಬಳಸುವುದು ಉತ್ತಮ. ಸಾರ್ವಜನಿಕರು ಪ್ರಯಾಣ ಮಾಡಲು ಯಾವುದೇ ಅಡ್ಡಿಯಿಲ್ಲ. ಎಲ್ಲರು ಸಹಜ ಜೀವನ ನಡೆಸಬಹುದು. ಮಾಧ್ಯಮಗಳು ಆತಂಕ ಸೃಷ್ಟಿಸುವುದು ಬೇಡ. ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಧ್ಯಮಗಳಿಂದ ಆಗಲಿ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಒಂದು ತಿಂಗಳಿಗಾಗುವಷ್ಟು ಟೆಸ್ಟಿಂಗ್ ಕಿಟ್ ಗಳನ್ನ ತೆಗೆದಿಟ್ಟುಕೊಳ್ಳಲು ಸೂಚಿಸಲಾಗಿದೆ. ಅಗತ್ಯವಿದ್ದಾಗ ಮಾತ್ರ ಟೆಸ್ಟ್ ಮಾಡಲಾಗುವುದು. ಬೆಂಗಳೂರಿನಲ್ಲಿ 32 ಕೋವಿಡ್ ಪಾಸಿಟಿವ್ ಪ್ರಕರಣಗಳಿದ್ದು, ಕಳೆದ ಒಂದು ವಾರದಲ್ಲಿ ಕೊಂಚ ಏರಿಕೆ ಕಂಡಿದೆ. ಎಲ್ಲವನ್ನ‌ ಮಾನಿಟರ್ ಮಾಡಲಾಗುತ್ತಿದೆ. ಸದ್ಯಕ್ಕೆ ಕೋವಿಡ್ ವಿಚಾರದಲ್ಲಿ ಆತಂಕಪಡುವ ಸ್ಥಿತಿ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!