spot_img
Sunday, February 15, 2026
spot_img

ಸಂಘಟನೆಗಳು ನಿಸ್ವಾರ್ಥ ಸೇವಾ ಮನೋಭಾವನೆಯಿಂದ ಕಾರ್ಯನಿರ್ವಹಿಸಬೇಕು-ಅಶೋಕ್ ಪೂಜಾರಿ ಬೀಜಾಡಿ

ಕುಂದಾಪುರ: ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಲ್ಲವ ಸಂಘಟನೆಗಳು ಹೆಚ್ಚು ಹೆಚ್ಚು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಸಮಾಜಕ್ಕೆ ತಿಳುವಳಿಕೆ ನೀಡುವ ಜವಾಬ್ದಾರಿಯನ್ನು ಅತ್ಯಂತ ನಿಸ್ವಾರ್ಥ ಮನೋಭಾವನೆಯಿಂದ ಕೈಗೊಂಡು, ಬಿಲ್ಲವ ಸಮುದಾಯವು ಇತರ ಸಮುದಾಯಗಳಿಗೆ ಮಾದರಿಯಾಗುವಂತಹ ಕೆಲಸ ಕಾರ್ಯಗಳನ್ನು ಹಮ್ಮಿಕೊಳ್ಳಬೇಕು ಎಂದು ಅಶೋಕ್ ಪೂಜಾರಿ ಬೀಜಾಡಿ ಹೇಳಿದರು.

ಅವರು ಬಿಲ್ಲವ ಸಮಾಜ ಸೇವಾ ಸಂಘ (ರಿ) ಕುಂದಾಪುರ ಇವರ ವತಿಯಿಂದ ಬೈಂದೂರು ಮತ್ತು ಕುಂದಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಬಿಲ್ಲವ ಸಂಘಟನೆಗಳ ಚಿಂತನ ಮಂಥನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕುಂದಾಪುರ ತಾಲೂಕು ವೈದ್ಯಾಧಿಕಾರಿ ಡಾ. ಪ್ರೇಮಾನಂದರವರು ಸಮುದಾಯದಲ್ಲಿ ಆರೋಗ್ಯದ ಕಾಳಜಿಯನ್ನು ಮೂಡಿಸಬೇಕು. ಜನತೆಗೆ ಆರೋಗ್ಯದ ಅರಿವು ನೀಡುವ ಕೆಲಸಗಳನ್ನು ಹಮ್ಮಿಕೊಳ್ಳಬೇಕು. ಸಂಘಟನೆಗಳು ಗ್ರಾಮೀಣ ಪ್ರದೇಶದಲ್ಲಿ, ಜನರಲ್ಲಿ ಆರೋಗ್ಯದ ಬಗೆಗೆ ಕಾಳಜಿಯನ್ನ ಮೂಡಿಸುವ ಕೆಲಸವನ್ನು ಮಾಡಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ಬಿಲ್ಲವ ಸಂಘದ ಮಹಿಳಾ ಘಟಕದ ಅಧ್ಯಕ್ಷರಾದ ಗಿರಿಜಾ ಮಾಣಿಗೋಪಾಲ್ ಬಿಲ್ಲವ ಸಂಘದ ಉಪಾಧ್ಯಕ್ಷರುಗಳಾದ ಮುಲ್ಲಿ ರಾಮ ಪೂಜಾರಿ ಹಾಗೂ ಶಿವರಾಮ ಪೂಜಾರಿ, ಬೈಂದೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಗಣೇಶ್ ಪೂಜಾರಿ ಸಂಘದ ಕಾರ್ಯದರ್ಶಿ ಯೋಗೀಶ್ ಪೂಜಾರಿ ಕೋಡಿ, ಯುವಕ ಮಂಡಲದ ಅಧ್ಯಕ್ಷರಾದ ಸಂದೇಶ ಪೂಜಾರಿ, ಕೋಶಾಧಿಕಾರಿ ವಿನಯ್ ಪೂಜಾರಿ ಬನ್ನಾಡಿ ಉಪಸ್ಥಿತರಿದ್ದರು.

ಚಿಂತನ ಮಂಥನದಲ್ಲಿ ಕುಂದಾಪುರ ಮತ್ತು ಬೈಂದೂರು ವಿಧಾನಸಭಾ ವ್ಯಾಪ್ತಿಗೆ ಒಳಪಡುವ 60 ವಿವಿಧ ಬಿಲ್ಲವ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಚರ್ಚೆಯಲ್ಲಿ ಪಾಲ್ಗೊಂಡು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಸಂಘಟನಾ ಚಾತುರ್ಯದಿಂದ ಸಂಘಟನೆಗಳನ್ನು ಬಲಪಡಿಸಿ ಜನಸಾಮಾನ್ಯರಿಗೆ ಅತ್ಯಗತ್ಯವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಸಂಘಟನೆಗಳು ಜನರ ಬಳಿಗೆ ತೆರಳಬೇಕು ಮತ್ತು ಅವರ ಸಮಸ್ಯೆಗಳಿಗೆ ಉತ್ತರ ನೀಡಬೇಕು ಎನ್ನುವ ಒಟ್ಟಾಭಿಪ್ರಾಯ ವ್ಯಕ್ತವಾಯಿತು.

ಗುಲಾಬಿ ಜಯಸೂರ್ಯ ಪೂಜಾರಿ ಪ್ರಾರ್ಥಿಸಿ, ಕಾರ್ಯದರ್ಶಿ ಯೋಗೀಶ್ ಪೂಜಾರಿ ಕೋಡಿ ಸ್ವಾಗತಿಸಿದರು. ಶ್ರೀ ನಾರಾಯಣಗುರು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ದತ್ತಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ರಾಜೇಶ್ ಕಡ್ಗಿ ಮನೆ ಕಾರ್ಯಕ್ರಮ ನಿರೂಪಣೆ ಮಾಡಿದರು. ಬಿಲ್ಲವ ಸೇವಾ ಸಂಘ(ರಿ)ಕುಂದಾಪುರ ಕಾರ್ಯಕ್ರಮ ಸಂಯೋಜನೆ ಮಾಡಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!