spot_img
Tuesday, March 24, 2026
spot_img

ಧಾರ್ಮಿಕ ಮುಂದಾಳು, ವಾಲಿಬಾಲ್ ಆಟಗಾರ ಜಯಾನಂದ ಖಾರ್ವಿ ಹೃದಯಾಘಾತದಿಂದ ನಿಧನ

ಕುಂದಾಪುರ: ಕುಂದಾಪುರದ ಖಾರ್ವಿಕೇರಿ ನಿವಾಸಿ, ಧಾರ್ಮಿಕ ಮುಂದಾಳು, ವಾಲಿಬಾಲ್ ಆಟಗಾರ ಜಯಾನಂದ ಖಾರ್ವಿ (64ವ) ಮೇ 26ರ ಮುಂಜಾನೆ ಹೃದಯಾಘಾತದಿಂದ ನಿಧನರಾದರು.

ರಾಜ್ಯದ ಮುಂಚೂಣಿಯ ವಾಲಿಬಾಲ್ ಆಟಗಾರರಾಗಿದ್ದ ಅವರು 1980-90 ದಶಕದಲ್ಲಿ ಪ್ರಸಿದ್ಧ ಆಟಗಾರರಾಗಿದ್ದರು. ಭಂಡಾರಕಾರ್ಸ್ ಕಾಲೇಜಿನಲ್ಲಿ ಪದವಿ ಪಡೆದು ವಾಲಿಬಾಲ್ ನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದರು.

ವೃತ್ತಿಯಲ್ಲಿ ಗುತ್ತಿಗೆದಾರರಾಗಿ ಜೀವನ ನಿರ್ವಹಣೆ ಮಾಡಿಕೊಂಡು ಕೊಂಕಣಿ ಖಾರ್ವಿ ಸಮಾಜದ ಪ್ರತಿಷ್ಠಿತ ಶ್ರೀ ಮಹಾಕಾಳಿ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ೧೦ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ವಿದ್ಯಾರಂಗ ಮಿತ್ರ ಮಂಡಳಿ(ರಿ)ಯ ವಿದ್ಯಾನಿಧಿ ಯೋಜನೆಯ ರಜತ ಮಹೋತ್ಸವ ಸಮಿತಿಯ ಅಧ್ಯಕ್ಷರಾಗಿ ವಿದ್ಯಾರ್ಥಿಗಳಿಗೆ ವಿನೂತನವಾದ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ವಿಧ್ಯಾರ್ಥಿಗಳಿಗೆ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿಕೊಂಡು ಬಂದವರು.

ಧಾರ್ಮಿಕ ಸೇವೆಯಲ್ಲಿ ಮುಂಚೂಣಿಯಲ್ಲಿದ್ದು ಕುಂದೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ, ನಂದಿಕೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸದಸ್ಯರಾಗಿ ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಸಕ್ರೀಯವಾಗಿ ಇತ್ತೀಚೆಗೆ ನಡೆದ ಮಹಾಗಂಗಾರತಿಯ ಜವಾಬ್ದಾರಿಯನ್ನು ಸಮರ್ಪಕವಾಗಿ ನಡೆಸಿ ಧಾರ್ಮಿಕ ಸೇವೆ ಸಲ್ಲಿಸಿಕೊಂಡು ಬಂದಿದ್ದರು.
ಮೃತರು ಪತ್ನಿ ಶಾರದಾ, ಪುತ್ರ ಭರತ್ ನಿಶಾನ್, ಪುತ್ರಿ ನಿಹಾರಿಕಾ ಅವರನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!