spot_img
Wednesday, April 1, 2026
spot_img

ಕೋವಿಡ್‌ ಪ್ರಕರಣಗಳ ಏರಿಕೆ | ಆರೋಗ್ಯ ಇಲಾಖೆಯ ಸಿಬ್ಬಂದಿಗಳ ರಜೆ ರದ್ದುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

ಜನಪ್ರತಿನಿಧಿ (ಬೆಂಗಳೂರು) : ರಾಜ್ಯದಲ್ಲಿ ಕೊವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಬೆಂಗಳೂರಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಆರೋಗ್ಯ ಇಲಾಖೆಗೆ ಮಹತ್ವದ ಸೂಚನೆಗಳನ್ನು ನೀಡಿದ್ದಾರೆ.

ಕೊವಿಡ್ ಆತಂಕ ಹಿನ್ನೆಲೆಯಲ್ಲಿ ಪ್ರಮುಖವಾಗಿ ತಕ್ಷಣದಿಂದಲೇ ಜಾರಿಯಾಗುವಂತೆ ಆರೋಗ್ಯ ಇಲಾಖೆ ಸಿಬ್ಬಂದಿಯ ರಜೆ ರದ್ದು ಮಾಡಲಾಗಿದೆ. ಪರಿಸ್ಥಿತಿ ತಿಳಿ ಆಗುವವರೆಗೆ ಯಾರಿಗೂ ರಜೆ ನೀಡದಂತೆ ಆರೋಗ್ಯ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಆರೋಗ್ಯ ಇಲಾಖೆಯ ಸಿಬ್ಬಂದಿ ಅವರವರ ಕೇಂದ್ರ ಸ್ಥಾನ ಬಿಟ್ಟು ಹೋಗದಂತೆ ಸೂಚಿಸಲಾಗಿದೆ.

ಕೋವಿಡ್ ಮುಂಜಾಗ್ರತಾ ಕ್ರಮಗಳ ಹಿನ್ನೆಲೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು ಹಲವಾರು ಸೂಚನೆಗಳನ್ನ ನೀಡಿದ್ದಾರೆ.

ಇನ್ನುಳಿದಂತೆ ಮುಂದಿನ ದಿನಗಳಲ್ಲಿ ಅವಶ್ಯಕತೆ ಕಂಡು ಬಂದರೆ ವಿಮಾನ ನಿಲ್ದಾಣಗಳಲ್ಲಿ ಹೊರಗಡೆಯಿಂದ ಬರುವ ಪ್ರಯಾಣಿಕರಿಗೆ ತಪಾಸಣಾ ಘಟಕಗಳನ್ನು ಪ್ರಾರಂಭಿಸಬೇಕು. ಕೋವಿಡ್ ವಿಷಯದಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಧೋರಣೆ ಅನುಸರಿಸಬಾರದು. ಎಲ್ಲಾ ಜಿಲ್ಲಾ ಆಸ್ಪತ್ರೆಗಳೂ ಸರ್ವ ಸನ್ನದ್ಧವಾಗಿ ಇರಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

ರೂಪಾಂತರಿ ಕೋವಿಡ್ ವೈರಾಣುವಿಗೆ ಸಂಬಂಧಿಸಿದಂತೆ ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆಯಾಗಿ ವ್ಯಾಕ್ಸಿನ್ ಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಸಾಮಾಜಿಕ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!