spot_img
Wednesday, April 1, 2026
spot_img

ಪಕ್ಷದ ಶಿಸ್ತು ಉಲ್ಲಂಘನೆ : ಎಸ್.ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಅವರನ್ನು ಉಚ್ಛಾಟಿಸಿದ ಬಿಜೆಪಿ

ಜನಪ್ರತಿನಿಧಿ (ಬೆಂಗಳೂರು) : ಹಾಲಿ ಶಾಸಕರಾದ ಎಸ್​.ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಅವರನ್ನ ಬಿಜೆಪಿ ಹೈಕಮಾಂಡ್‌ ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶಿಸಿದೆ.

ಬಿಜೆಪಿ ಕೇಂದ್ರ ಶಿಸ್ತು ಸಮಿತಿ, ಶಾಸಕರಾದ ಎಸ್.ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ತಕ್ಷಣದಿಂದಲೇ ಜಾರಿಯಾಗುವಂತೆ 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಮಾಡಿದೆ.

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬಿಜೆಪಿ ಶಿಸ್ತು ಸಮಿತಿ ಇಬ್ಬರು ಶಾಸಕರಿಗೆ ನೋಟಿಸ್ ನೀಡಿತ್ತು. ಆ ನೋಟಿಸ್‌ಗೆ ಮೇ 25ರ ಒಳಗೆ ಉತ್ತರಿಸುವಂತೆ ಸೂಚನೆ ನೀಡಿತ್ತು. ನೋಟಿಸ್‌ಗೆ ಉತ್ತರಿಸುವ ಗಡುವು ಮುಕ್ತಾಯವಾದ ಹಿನ್ನೆಲೆಯಲ್ಲಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿದೆ.

ಯಶವಂತಪುರ ಶಾಸಕರಾದ ಎಸ್.ಟಿ ಸೋಮಶೇಖರ್ ಹಾಗೂ ಯಲ್ಲಾಪುರ ಶಾಸಕರಾದ ಶಿವರಾಮ್ ಹೆಬ್ಬಾರ್ ಅವರ ಮೇಲೆ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ಆರೋಪ ಕೇಳಿ ಬಂದಿತ್ತು.

ಪದೇ ಪದೇ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಇಂದಿನಿಂದ ಶಾಸಕರಾದ ಎಸ್.ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರು ಬಿಜೆಪಿ ಪಕ್ಷದ ಸದಸ್ಯತ್ವದಿಂದ ಅಮಾನತುಗೊಂಡಿದ್ದಾರೆ.

https://x.com/ANI/status/1927273919351841026

https://x.com/ANI/status/1927273919351841026

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!