spot_img
Monday, March 16, 2026
spot_img

ಕೋವಿಡ್‌ ಆತಂಕ ಬೇಡ | ಸೋಂಕು ಎದುರಿಸಲು ಸಕಲ ಸಿದ್ಧತೆ | ಮಾಸ್ಕ್‌ ಸದ್ಯಕ್ಕೆ ಕಡ್ಡಾಯವಿಲ್ಲ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ರಾಜ್ಯದಲ್ಲಿ ಸದ್ಯಕ್ಕೆ ಕೋವಿಡ್‌ ಸೋಂಕಿನಿಂದ ಯಾವುದೇ ಭಯವಿಲ್ಲ. ಆದರೆ, ಪರಿಸ್ಥಿತಿ ಎದುರಿಸಲು ಸಕಲ ಸಿದ್ಧತೆ ನಡೆಸಲಾಗಿದೆ. ವೆಂಟಿಲೇಟರ್, ಆಮ್ಲಜನಕ, ವಾರ್ಡ್ ಗಳಿಗೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂತಹ ಪರಿಸ್ಥಿತಿ ಎದುರಾದರೂ ಎದುರಿಸಲು ಸಿದ್ಧರಾಗಿರಬೇಕು. ವೆಂಟಿಲೇಟರ್, ಆಮ್ಲಜನಕ, ವಾರ್ಡ್ ಗಳಿಗೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸುಮಾರು 65 ಇದ್ದ ಪ್ರಕರಣಗಳು 80 ಆಗಿವೆ. ಇದು ಗಂಭೀರವಾದ ತಳಿಯಲ್ಲ. ನೆಗಡಿ, ಕೆಮ್ಮು, ಜ್ವರ ಬಂದಿರುವ ಮಕ್ಕಳನ್ನು ಶಾಲೆಗೆ ಕಳುಹಿಸಬಾರದು ಹಾಗೂ ವೃದ್ಧರು, ವಿವಿಧ ಕಾಯಿಲೆಗಳಿಗೆ ತುತ್ತಾಗಿರರುವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಲಸಿಕೆಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ಸಂಗ್ರಹಿಸಬೇಕು ಎಂದು ಸೂಚಿಸಲಾಗಿದೆ ಎಂದು ಹೇಳಿದರು.

ಎಲ್ಲರೂ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿಲ್ಲ. ಆದರೆ ವೃದ್ಧರು, ಕಾಯಿಲೆಯಿರುವವರು ಮಾಸ್ಕ್ ಕಡ್ಡಾಯವಾಗಿ ಹಾಕಿಕೊಳ್ಳುವಂತೆ ಸೂಚಿಸಲಾಗಿದೆ. ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಮಾಡಲು ಕೇಂದ್ರದಿಂದ ಇನ್ನೂ ಸೂಚನೆ ಬಂದಿಲ್ಲ, ಆದರೂ ಎಚ್ಚರಿಕೆ ವಹಿಸಲಾಗುವುದು ಎಂದು ತಿಳಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!