spot_img
Monday, March 16, 2026
spot_img

ಕನ್ನಡ ಭಾಷೆಯ ಇತಿಹಾಸ ಕಮಲ್‌ ಗೆ ಗೊತ್ತಿಲ್ಲ | ಕ್ಷಮೆ ಕೇಳದಿದ್ದಲ್ಲಿ ‘ಥಗ್ ಲೈಫ್’ ಚಿತ್ರಕ್ಕೆ ತಡೆ : ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಕನ್ನಡ ಭಾಷೆಗೆ ಬಹಳ ದೀರ್ಘ ಇತಿಹಾಸವಿದೆ. ಆದರೆ ನಟ ಕಮಲ್ ಹಾಸನ್ ಅವರಿಗೆ ಕನ್ನಡದ ಇತಿಹಾಸ ಹೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ನಟ ಕಮಲ್ ಹಾಸನ್ ಅವರು ಇತ್ತೀಚೆಗೆ ಚೆನ್ನೈನಲ್ಲಿ ನಡೆದ ತಮ್ಮ ಮುಂಬರುವ ಚಿತ್ರ ಥಗ್ ಲೈಫ್’ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಹೇಳಿದ್ದು, ಇದಕ್ಕೆ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ನಗರದಲ್ಲಿ ಕಮಲ್ ಹಾಸನ್ ಹೇಳಿಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, “ಕನ್ನಡ ಭಾಷೆಗೆ ಬಹಳ ದೀರ್ಘ ಇತಿಹಾಸವಿದೆ…. ಅವರಿಗೆ(ಕಮಲ್ ಹಾಸನ್) ಗೊತ್ತಿಲ್ಲ” ಎಂದು ತಿರುಗೇಟು ನೀಡಿದರು.

ಬೆಂಗಳೂರು, ಬೆಳಗಾವಿ, ಮೈಸೂರು ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಿ ಹಲವಾರು ಕನ್ನಡ ಪರ ಸಂಘಟನೆಗಳ ಪ್ರತಿಭಟನೆ ನಡೆಸುತ್ತಿವೆ.

ನಟ-ರಾಜಕಾರಣಿ ಕಮಲ್ ಹಾಸನ್ ಅವರು ರಾಜ್ಯದ ಜನರಲ್ಲಿ ಕ್ಷಮೆಯಾಚಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಅಲ್ಲದೆ ಕ್ಷಮೆಯಾಚಿಸಲು ವಿಫಲವಾದರೆ, ಅವರ ‘ಥಗ್ ಲೈಫ್’ ಚಿತ್ರ ಪ್ರದರ್ಶನವನ್ನು ತಡೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಕಮಲ್‌ ಹಾಸನ್‌ ಅವರು ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಕಮಲ್‌ ಹೇಳಿಕೆ ರಾಜ್ಯದಾದ್ಯಂತ ಕನ್ನಡ ಅಭಿಮಾನಿಗಳನ್ನು ಕೆರಳಿಸಿದ್ದು ಎಲ್ಲೆಡೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!