spot_img
Monday, March 16, 2026
spot_img

ಕರ್ನಾಟಕ ರಾಜ್ಯದ ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ಅನಿಲ್ ಕುಂಬ್ಳೆ

ಜನಪ್ರತಿನಿಧಿ (ಬೆಂಗಳೂರು) : ಭಾರತ ತಂಡದ ಲೆಜೆಂಡರಿ ಆಟಗಾರ, ಮಾಜಿ ಕೋಚ್ ಹಾಗೂ ಹೆಮ್ಮೆಯ ಕನ್ನಡಿಗ ಅನಿಲ್ ಕುಂಬ್ಳೆ ಅವರನ್ನು ಕರ್ನಾಟಕ ರಾಜ್ಯದ ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮನಿರ್ದೇಶನ ಮಾಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಅನಿಲ್ ಕುಂಬ್ಳೆ ಅವರು ಕರ್ನಾಟಕ ಸರ್ಕಾರಕ್ಕೆ ಟ್ವೀಟ್ ಮಾಡುವ​ ಮೂಲಕ ಧನ್ಯವಾದ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಅನಿಲ್‌ ಕುಂಬ್ಳೆ ಅವರು ವಿಶ್ವಾದ್ಯಂತ ಖ್ಯಾತಿ ಹೊಂದಿದ್ದಾರೆ. ಅರಣ್ಯ, ವನ್ಯಜೀವಿ ಸಂರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ. ಇನ್ನು ಈ ಮಹತ್ತರ ಕಾರ್ಯಕ್ಕೆ, ಸಮಾಜಮುಖಿ ಉದ್ದೇಶದಿಂದ ಕುಂಬ್ಳೆ ಅವರು ಯಾವುದೇ ಸಂಭಾವನೆ ಪಡೆಯುತ್ತಿಲ್ಲ ಎಂದು ಹೇಳಿದ್ದಾರೆ.

ಅರಣ್ಯ ಮತ್ತು ಪರಿಸರ ಸಂರಕ್ಷಣೆಯ ಹಿತಾಸಕ್ತಿಯಿಂದ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ, ವಿಶ್ವದ ಶ್ರೇಷ್ಠ ಕ್ರಿಕೆಟಿಗ ಹಾಗೂ ಕನ್ನಡಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಹಾಗೂ ವನ್ಯಜೀವಿ ರಾಯಭಾರಿಯಾಗಿ ನಾಮನಿರ್ದೇಶಿಸಲು ನಿರ್ಣಯ ಕೈಗೊಂಡಿದ್ದೇವೆ ಎಂದು ಅರಣ್ಯ ಸಚಿವರು ತಿಳಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!