spot_img
Monday, March 16, 2026
spot_img

ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ ಪ್ರಥಮ ಸ್ಥಾನಿ “ಸಾಯಿಸ್ಪರ್ಶ”ಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಸನ್ಮಾನ

ಕುಂದಾಪುರ: 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ 625 ರಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಕುಂದಾಪುರ ವಿ.ಕೆ.ಆರ್ ಆಚಾರ್ಯ ಪ್ರೌಢಶಾಲೆಯ ವಿದ್ಯಾರ್ಥಿನಿ ಸಾಯಿಸ್ಪರ್ಶ ಅವರನ್ನು ಕುಂದಾಪುರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಚಂದ್ರಶೇಖರ್ ಶೆಟ್ಟಿ ಇವರು ಈ ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಚಂದ್ರಶೇಖರ ಶೆಟ್ಟಿ ಅವರು, ಸಾಯಿಸ್ಪರ್ಶ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದು ಕುಂದಾಪುರ ವಲಯಕ್ಕೆ, ಉಡುಪಿ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ. ಅವಳ ಮುಂದಿನ ಶೈಕ್ಷಣಿಕ ಭವಿಷ್ಯ ಉತ್ತಮವಾಗಿರಲೆಂದು ಹಾರೈಸಿದ್ದರು.
ಈ ಸಂದರ್ಭದಲ್ಲಿ ವಲಯದ ಎಸ್.ಎಸ್.ಎಲ್.ಸಿ. ನೋಡಲ್ ಶೇಖರ್ ಪಡುಕೋಣೆ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!