spot_img
Monday, March 16, 2026
spot_img

ಬಿ.ಬಿ. ಹೆಗ್ಡೆ ಕಾಲೇಜು : ಸಿ.ಎ., ಸಿ.ಎಸ್., ಸಿ.ಎಮ್.ಎ. ವಿದ್ಯಾರ್ಥಿಗಳಿಗೆ ಪೂರ್ವಪರಿಚಯ, ಸಾಧಕರಿಗೆ ಸನ್ಮಾನ

ಜನಪ್ರತಿನಿಧಿ (ಕುಂದಾಪುರ) : ನಗರದೊಂದಿಗೆ ಗ್ರಾಮೀಣ ಪ್ರದೇಶದ ಬಡ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಮಹತ್ವಾಕಾಂಕ್ಷೆಯಿಂದ ಹುಟ್ಟಿಕೊಂಡ ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ 2025- 26ನೇ ಸಾಲಿನ ಪ್ರಥಮ ವರ್ಷದ ಸಿ.ಎ., ಸಿ.ಎಸ್., ಸಿ.ಎಮ್.ಎ. ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ ಹಾಗೂ ಮುಂದಿನ ದಿನಗಳಲ್ಲಿ ನಡೆಯುವ ತರಬೇತಿಯ ಉದ್ಘಾಟನಾ ಸಮಾರಂಭ ನೆರವೇರಿತು.

ಉಡುಪಿಯ ವಿ-ರೀಚ್ ಸಂಸ್ಥೆಯ ಸ್ಥಾಪಕರು ಹಾಗೂ ತರಬೇತುದಾರ ಸಿ.ಎಸ್. ಸಂತೋಷ್ ಪ್ರಭು ಅವರು ಉದ್ಘಾಟಿಸಿ, ವರ್ತಮಾನದಲ್ಲಿ ಸಿ.ಎ., ಸಿ.ಎಸ್., ಸಿ.ಎಮ್.ಎ. ಪ್ರೊಫೆಷನಲ್ ಕೋರ್ಸ್ಗಳ ಮಹತ್ವ ಹಾಗೂ ವಿದ್ಯಾರ್ಥಿಗಳ ಓದಿನ ಕ್ರಮದ ಕುರಿತು ಮಾತನಾಡಿದರು.

ಇದೇ ಸಂದರ್ಭ ಈ ಹಿಂದೆ ನಡೆದ ಸಿ.ಎ., ಸಿ.ಎಸ್., ಸಿ.ಎಮ್.ಎ. ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ| ಕೆ. ಉಮೇಶ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಪ್ರೊಫೆಷನಲ್ ಕೋರ್ಸ್ ಅಭ್ಯಾಸದ ಪೂರ್ವದಲ್ಲಿ ಇರಬೇಕಾದ ಛಲ ಹಾಗೂ ಅಭ್ಯಾಸ ಸಮಯದಲ್ಲಿರಬೇಕಾದ ನಿಷ್ಠೆ, ಪಾಲಿಸಬೇಕಾದ ವೈಯಕ್ತಿಕ ವೇಳಾಪಟ್ಟಿ, ಬೆಳೆಸಿಕೊಳ್ಳಬೇಕಾದ ಹವ್ಯಾಸ, ಆಹಾರ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಉಪ-ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ ಅವರು ಸಂಸ್ಥೆಯಲ್ಲಿ ಸಿ.ಎ., ಸಿ.ಎಸ್., ಸಿ.ಎಮ್.ಎ.

ವಿದ್ಯಾರ್ಥಿಗಳಿಗೆ ಇರಬೇಕಾದ ಶಿಸ್ತು ಮತ್ತು ಇದನ್ನು ನಿಭಾಯಿಸಲು ಬೇಕಾದ ಸಂಯಮಗಳ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದರು.

ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ವಿ. ಭಟ್ ಸ್ವಾಗತಿಸಿ, ಕಾರ್ಯಕ್ರಮದ ಸಂಯೋಜಕ ಸುಹಾಸ್ ಜಟ್ಟಿಮನೆ ವಂದಿಸಿ, ಅಂತಿಮ ವರ್ಷದ ವಿದ್ಯಾರ್ಥಿನಿ ಸಿಂಚನ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಎಲ್ಲಾ ಪ್ರಾಧ್ಯಾಪಕರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!