spot_img
Monday, March 16, 2026
spot_img

ನಾಳೆಯಿಂದ ಮತ್ತೆ ಶಾಲೆ ಆರಂಭ | ಮೇ 30ರಂದು ಮಕ್ಕಳನ್ನು ಸ್ವಾಗತಿಸಲು ಸಜ್ಜುಗೊಳಿಸುವಂತೆ ಸುತ್ತೋಲೆ

ಜನಪ್ರತಿನಿಧಿ (ಬೆಂಗಳೂರು) : ಬೇಸಿಗೆ ರಜೆ ಮುಗಿದು ನಾಳೆಯಿಂದ ಶಾಲೆಗಳು ಪುನರಾರಂಭವಾಗುತ್ತಿದೆ.

ಈ ಹಿನ್ನೆಲೆಯಲ್ಲಿ  ಶಿಕ್ಷಕರು, ಮುಖ್ಯಶಿಕ್ಷಕರು ಮತ್ತು ಇತರೆ ಸಿಬ್ಬಂದಿ ಮೇ 29ರಂದು ರಾಜ್ಯದ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಜರಾಗಬೇಕು. ಶಾಲಾ ಆವರಣ, ಕೊಠಡಿಗಳು, ಶೌಚಾಲಯ, ಮೇಲ್ಚಾವಣಿ ಹಾಗೂ ಬಿಸಿಯೂಟದ ಪರಿಕರಗಳನ್ನು ಸ್ವಚ್ಛಗೊಳಿಸಬೇಕು. ತಳಿರು ತೋರಣ, ರಂಗೋಲಿ ಬಿಡಿಸಿ ಶಾಲೆಗಳನ್ನು ಅಲಂಕರಿಸಬೇಕು. ಮೇ 30ರಂದು ಮಕ್ಕಳನ್ನು ಸ್ವಾಗತಿಸಲು ಎಲ್ಲ ಶಾಲೆಗಳು ಸಜ್ಜುಗೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ.

ಬಿಸಿಯೂಟಕ್ಕೆ ಅಗತ್ಯವಾದ ಪಡಿತರ, ಬೇಳೆ, ತರಕಾರಿ, ಮೊಟ್ಟೆ ತಂದಿಟ್ಟುಕೊಳ್ಳಬೇಕು. ಶುದ್ಧ ಕುಡಿಯುವ ನೀರು ಸಂಗ್ರಹಿಸಬೇಕು. ಅಡುಗೆ ಸಿಬ್ಬಂದಿ, ಸಹಾಯಕ ಆರೋಗ್ಯ ತಪಾಸಣೆ ನಡೆಸಬೇಕು. ಸಿಹಿಯೂಟದ ಜತೆಗೆ ಮೊದಲ ದಿನವೇ ಬೇಯಿಸಿದ ಮೊಟ್ಟೆ ವಿತರಣೆ ಮಾಡಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!