spot_img
Tuesday, March 31, 2026
spot_img

ಹೊಸಂಗಡಿ, ನಾಡ, ಹೇರೂರು ಗ್ರಾಮದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡಕ್ಕೆ ಸ್ಥಳ ಮಂಜೂರು| ಶೀಘ್ರದಲ್ಲೇ ಕಟ್ಟಡ ನಿರ್ಮಾಣಕ್ಕೆ ಚಾಲನೆ-ಶಾಸಕ ಗಂಟಿಹೊಳೆ

ಬೈಂದೂರು: ಬೈಂದೂರು ವಿಧಾನ ಸಭಾ ಕ್ಷೇತ್ರದಲ್ಲಿ ಆರೋಗ್ಯ ಕ್ಷೇತ್ರವನ್ನು ಬಲವರ್ಧನೆ ಮಾಡುವ ನಿಟ್ಟಿನಲ್ಲಿ 2023-24ನೇ ಸಾಲಿನಲ್ಲಿ 15ನೇ ಹಣಕಾಸು ಆಯೋಗದಡಿ ರಾಜ್ಯದ ಆರೋಗ್ಯ ವಲಯದ ಕಾರ್ಯಕ್ರಮಗಳಿಗೆ ಕೇಂದ್ರ ಸರಕಾರ ಅನುಮೋದನೆ ನೀಡಿದ್ದು, ಬೈಂದೂರು ಕ್ಷೇತ್ರದ 3 ಕಡೆ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡಕ್ಕೆ ಸರಕಾರಿ ನಿವೇಶನ ಮಂಜೂರಾತಿ ಮಾಡಲಾಗಿದ್ದು ಶೀಘ್ರದಲ್ಲೇ ಹೊಸದಾಗಿ 1.95 ಕೋಟಿ ವೆಚ್ಚದಲ್ಲಿ 3 ಕಡೆ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆಯವರು ತಿಳಿದ್ದಾರೆ

ಕುಂದಾಪುರ ತಾಲೂಕು ಹೊಸಂಗಡಿ ಗ್ರಾಮದ ಸರ್ವೇ ನಂಬ್ರ 49/1 ರಲ್ಲಿ 0.29 ಎಕ್ರೆ ವಿಸ್ತೀರ್ಣ, ಬೈಂದೂರು ತಾಲೂಕು ನಾಡ ಗ್ರಾಮದ ಸರ್ವೇ ನಂಬ್ರ 185 ರಲ್ಲಿ 0.05 ಎಕ್ರೆ ಹಾಗೂ ಹೇರೂರು ಗ್ರಾಮದ ಸರ್ವೇ ನಂಬ್ರ 83 ರಲ್ಲಿ 0.10 ಎಕ್ರೆ ಜಾಗವನ್ನು ಆರೋಗ್ಯ ಮತ್ತು ಕ್ಷೇಮ ಕೇಂದ್ರದ( ಹೆಲ್ತ್ & ವೆಲ್ ನೆಸ್ ಸೆಂಟರ್) ಉದ್ದೇಶಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಸರಿಗೆ ಮಂಜೂರು ಮಾಡಿಸಲಾಗಿದೆ ಎಂದು ಶಾಸಕರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!