spot_img
Sunday, March 22, 2026
spot_img

ಪೌರಕಾರ್ಮಿಕರ ನ್ಯಾಯಯುತ ಬೇಡಿಕೆಗೆ ಬೆಂಬಲ-ಶಾಸಕ ಎ.ಕಿರಣ್ ಕೊಡ್ಗಿ

ಕುಂದಾಪುರ, ಮೇ 29: ಪೌರ ಕಾರ್ಮಿಕರು ಇಲ್ಲದೆ ನಾವು ನಗರನ್ನು ಊಹಿಸಲು ಸಾಧ್ಯವಿಲ್ಲ. ಸ್ವಚ್ಛ ನಗರಕ್ಕೆ ಪೌರ ಕಾರ್ಮಿಕರ ಸೇವೆ ಅಪಾರ. ಪೌರ ಕಾರ್ಮಿಕರ ನ್ಯಾಯಯುತ ಬೇಡಿಕೆಗೆ ನನ್ನ ಬೆಂಬಲವಿದೆ. ಪೌರ ಕಾರ್ಮಿಕರ ನೇಮಕಾತಿ ಖಾಯಂಗೆ ಹಾಗೂ ಜೀವನಾಧಾರ ಬೇಡಿಕೆಗಳ ಈಡೇರಿಕೆಗಾಗಿ ಪೌರ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದು, ಅವರ ಸಮಸ್ಯೆ ಬಗೆಹರಿಸುವ ಬಗ್ಗೆ ಶೀಘ್ರವೇ ರಾಜ್ಯದ ಮುಖ್ಯಮಂತ್ರಿಯವರ ಹಾಗೂ ಸಂಬಂಧಪಟ್ಟ ಪೌರಾಡಳಿತ ಮತ್ತು ಹಜ್ ಖಾತೆ ಸಚಿವರ ಗಮನಕ್ಕೆ ತಂದು ನ್ಯಾಯುತವಾಗಿ ಬೇಡಿಕೆ ಈಡೇರಿಸುವ ಪ್ರಯತ್ನವನ್ನು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಕುಂದಾಪುರ ಪುರಸಭಾ ಕಚೇರಿ ಮುಂಭಾಗದಲ್ಲಿ ಪೌರ ಕಾರ್ಮಿಕರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಭೇಟಿ ನೀಡಿದ ಅವರು ಪೌರ ಕಾರ್ಮಿಕರು ನೀಡಿದ ಮನವಿಯನ್ನು ಸ್ವೀಕರಿಸಿ, ಮುಷ್ಕರ ನಿರತರನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ಮೋಹನದಾಸ ಶೆಣೈ, ತಾಲೂಕು ಗ್ಯಾರೆಂಟಿ ಯೋಜನೆಯ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಪುರಸಭೆ ಉಪಾಧ್ಯಕ್ಷೆ ವನಿತಾ ಬಿಲ್ಲವ, ಪುರಸಭಾ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

ಪೌರ ಕಾರ್ಮಿಕರು ವಿವಿಧ ಬೇಡಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!