spot_img
Sunday, March 22, 2026
spot_img

ಜ್ಞಾನಸುಧಾ ಶ್ರೀ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ | ಪ್ರತಿಭಾ ಪುರಸ್ಕಾರ : ರೂ.1 ಕೋಟಿ 5 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

ಗಣಿತ ನಗರ : ಕಾರ್ಕಳ ಜ್ಞಾನಸುಧಾ ಆವರಣದಲ್ಲಿರುವ ಶ್ರೀ ಮಹಾಗಣಪತಿ ದೇವಸ್ಥಾನದ ಅಷ್ಟಬಂಧಹಾಗೂ ಬ್ರಹ್ಮಕಲಶೋತ್ಸವವು 30.05.2025ರ ಶುಕ್ರವಾರದಂದು ಜರುಗಲಿದ್ದು, ಆ ದಿನ ಬೆಳಗ್ಗೆ 10ಗಂಟೆಗೆ ಸರಿಯಾಗಿ ಅಜೆಕಾರ್ ಪದ್ಮಗೋಪಾಲ್‍ಎಜ್ಯುಕೇಶನ್ ಟ್ರಸ್ಟಿನ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಮೊದಲ ಹಂತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ನಡೆಯಲಿದೆ.

ಈ ಸಂದರ್ಭದಲ್ಲಿ ಸಂಸ್ಥೆಯ2025ರ ವಾರ್ಷಿಕ ಪರೀಕ್ಷೆಯ ಸಾಧಕ ವಿದ್ಯಾರ್ಥಿಳಿಗೆ ರೂ.64ಲಕ್ಷದ22 ಸಾವಿರ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ರೂ.18 ಲಕ್ಷದ 78 ಸಾವಿರ, ಸಂಸ್ಥೆಯ ಉದ್ಯೋಗಿಗಳ ಮಕ್ಕಳ ಉಚಿತ ಶಿಕ್ಷಣಕ್ಕೆರೂ. 14 ಲಕ್ಷದ 87 ಸಾವಿರ, ಇಲಾಖಾ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಸುವ ಪ್ರತೀ ನೂರು ಅಂಕಗಳಿಗೆ ವಿದ್ಯಾರ್ಥಿಗೆ ಹಾಗೂ ಅಧ್ಯಾಪಕರಿಗೆತಲಾರೂಒಂದು ಸಾವಿರದಂತೆರೂ.7 ಲಕ್ಷದ 21 ಸಾವಿರವೂ ಸೇರಿದಂತೆಒಟ್ಟುರೂ.1 ಕೋಟಿ 5 ಲಕ್ಷದಷ್ಟು ವಿದ್ಯಾರ್ಥಿ ವೇತನವನ್ನು ನೀಡಲಾಗುವುದು.
ಈ ಕಾರ್ಯಕ್ರಮದಅಧ್ಯಕ್ಷತೆಯನ್ನು ಕಾರ್ಕಳ ಕ್ಷೇತ್ರದ ಶಾಸಕರಾದ  ವಿ.ಸುನಿಲ್ ಕುಮಾರ್ ವಹಿಸಿಕೊಳ್ಳಲಿದ್ದು, ಮುಖ್ಯ ಅತಿಥಿಗಳಾಗಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರಾದ  ಕೋಟ ಶ್ರೀನಿವಾಸ ಪೂಜಾರಿಯವರು ಹಾಗೂ ಮಂಗಳೂರು ವಿಶ್ವ ವಿದ್ಯಾನಿಲಯದ ಉಪಕುಲಪತಿ ಪ್ರೋ.ಪಿ.ಎಲ್.ಧರ್ಮರವರು ಭಾಗವಹಿಸಲಿದ್ದಾರೆ.ಇದೇ ಸಂದರ್ಭ ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿರಾಜ್ಯಕ್ಕೆಮೊದಲ ಹತ್ತರೊಳಗಿನ ರ್ಯಾಂಕ್ ಗಳಿಸಿದ ಸಾಧಕ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಗುವುದು.
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಡಿಸೆಂಬರ್ 22 ರಂದು ನಡೆಯುವಎರಡನೇ ಹಂತದ ಪ್ರತಿಭಾ ಪುರಸ್ಕಾರಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು.ಕಳೆದ ವರ್ಷ ಸಂಸ್ಥೆಯಿಂದ ವಿದ್ಯಾರ್ಥಿ ವೇತನಕ್ಕಾಗಿಒಟ್ಟು 1 ಕೋಟಿ 79 ಲಕ್ಷದ 54 ಸಾವಿರ ಹಾಗೂ ವಿವಿಧ ಸಾಮಾಜಿಕ ಕಾರ್ಯಗಳಿಗಾಗಿ ರೂ. 51 ಲಕ್ಷದ 64 ಸಾವಿರವನ್ನು ನೀಡಲಾಗಿರುವುದನ್ನು ಸ್ಮರಿಸಿಕೊಳ್ಳ ಬಹುದುಎಂದುಅಜೆಕಾರ್ ಪದ್ಮಗೋಪಾಲ್‍ಎಜ್ಯುಕೇಶನ್ ಟ್ರಸ್ಟಿನ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!