spot_img
Wednesday, March 4, 2026
spot_img

ಕಾವ್ಯ ತಪಸ್ವಿ ಹೆಚ್.ಎಸ್‌. ವೆಂಕಟೇಶಮೂರ್ತಿ ಅಸ್ತಂಗತ

ಜನಪ್ರತಿನಿಧಿ (ಬೆಂಗಳೂರು) :  ಕನ್ನಡದ ಸಾಹಿತಿ, ಹೆಸರಾಂತ ಕವಿ ಹೆಚ್.ಎಸ್ ವೆಂಕಟೇಶಮೂರ್ತಿ ಇನ್ನಿಲ್ಲ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಹೆಚ್.ಎಸ್.ವಿ ಅವರು ಬೆಂಗಳೂರಿನ ಬಿಜಿಎಸ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಹೆಚ್ಎಸ್‌ವಿ ಅಂತಲೇ ಚಿರಪರಿಚಿತರಾಗಿದ್ದ ಅವರು, ಕನ್ನಡಕ್ಕೆ ಅನೇಕ ಕವಿತೆಗಳನ್ನು, ನಾಟಕಗಳನ್ನು, ಸಾಹಿತ್ಯಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಹೆಚ್.ಎಸ್.ವೆಂಕಟೇಶಮೂರ್ತಿ (ಎಚ್ಎಸ್‌ವಿ ) ಕನ್ನಡ ಸಾಹಿತ್ಯದ ಪ್ರಮುಖ ಕವಿ, ನಾಟಕಕಾರ, ವಿಮರ್ಶಕ ಹಾಗೂ ಪ್ರಾಧ್ಯಾಪಕರಾಗಿ ದುಡಿದಿದ್ದರು.

ಹೊದಿಗೆರೆ ಗ್ರಾಮದಲ್ಲಿ ಜನನ

ವೆಂಕಟೇಶ್​ಮೂರ್ತಿ ಅವರು 1944ರ ಜೂನ್ 23ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಗ್ರಾಮದಲ್ಲಿ ಜನಿಸಿದ್ದರು. ತಂದೆ ನಾರಾಯಣ ಭಟ್ಟರು ಮತ್ತು ತಾಯಿ ನಾಗರತ್ನಮ್ಮ ಪುತ್ರರಾಗಿ ಹೆಚ್‌ಎಸ್‌ವಿ ಜನಿಸಿದ್ದರು.

ಹೆಚ್ಎಸ್‌ವಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಎಂಎ ಪದವಿ ಪಡೆದುಕೊಂಡಿದ್ದರು. ಸುಮಾರು 30 ವರ್ಷಗಳ ಕಾಲ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು.  ‘ಕನ್ನಡದಲ್ಲಿ ಕಥನ ಕವನಗಳು’ ಎಂಬ ಮಹಾಪ್ರಬಂಧಕ್ಕೆ ಪಿಎಚ್​ಡಿ ಪದವಿಯೊಂದಿಗೆ ಡಾಕ್ಟರೇಟ್​ ಪಡೆದುಕೊಂಡಿದ್ದರು. 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿಯೂ ಸಮರ್ಥವಾಗಿ ಜವಾಬ್ದಾರಿ ನಿಭಾಯಿಸಿದ್ದರು.

ಹೆಚ್​ಎಸ್​ವಿ ಸುಮಾರು 100ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಅವರ ಪ್ರಮುಖ ಕವನ ಸಂಕಲನಗಳಲ್ಲಿ ‘ಪರಿವೃತ್ತ’, ‘ಬಾಗಿಲು’ ‘ಬಡಿವ ಜನಗಳು’, ‘ಸೌಗಂಧಿಕ’, ‘ಮೂವತ್ತು ಮಳೆಗಾಲ’ ಇತ್ಯಾದಿ. ‘ಹೆಜ್ಜೆಗಳು’, ‘ಒಂದು ಸೈನಿಕ ವೃತ್ತಾಂತ’, ‘ಅಗ್ನಿವರ್ಣ’ ಸೇರಿದಂತೆ ಅನೇಕ ನಾಟಕಗಳನ್ನೂ ರಚಿಸಿದ್ದಾರೆ.

ಚಿತ್ರರಂಗಕ್ಕೂ ಹೆಚ್‌.ಎಸ್.ವಿ : 

ಅಷ್ಟೇ ಅಲ್ಲದೇ ಕನ್ನಡ ಚಿತ್ರರಂಗಕ್ಕೂ ತಮ್ಮ ಕೊಡುಗೆ ನೀಡಿದ್ದಾರೆ. ‘ಚಿನ್ನಾರಿ ಮುತ್ತ’, ‘ಕೋಟ್ರೇಶಿ ಕನಸು’, ‘ಅಮೆರಿಕಾ ಅಮೆರಿಕಾ’, ‘ಮೈತ್ರಿ’, ‘ಕಿರಿಕ್ ಪಾರ್ಟಿ’ ಮುಂತಾದ ಚಿತ್ರಗಳಿಗೆ ಹಾಡುಗಳು ಮತ್ತು ಸಂಭಾಷಣೆ ರಚಿಸಿದ್ದರು. ಮುಕ್ತ, ಮುಕ್ತ ಮುಕ್ತ, ಮಹಾಪರ್ವ, ಮಗಳು ಜಾನಕಿ ಸೇರಿದಂತೆ ಮುಂತಾದ ಧಾರಾವಾಹಿಗಳಿಗೆ ಶೀರ್ಷಿಕೆ ಗೀತೆಗಳನ್ನೂ ಅವರು  ಬರೆದು ಜನಪ್ರಿಯ ಸಾಹಿತಿಯಾಗಿದ್ದರು.

ಹೆಚ್.ಎಸ್ ವೆಂಕಟೇಶಮೂರ್ತಿ ಅವರು ಕೆಲದಿನಗಳಿಂದ ವಯೋಸಹಜ ಅನಾರೋಗ್ಯ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ 7 ಗಂಟೆಗೆ ಬಿಜಿಎಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!