spot_img
Wednesday, March 4, 2026
spot_img

ಮಂಗಳೂರು : ಭಾರಿ ಮಳೆ | ಮನೆ ಮೇಲೆ ಗುಡ್ಡ ಕುಸಿದು ಏಳು ವರ್ಷದ ಕಂದ ನಿಧನ

ಜನಪ್ರತಿನಿಧಿ (ಮಂಗಳೂರು) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ರಾತ್ರಿಯಿಡೀ ಸುರಿದ ಮಳೆಗೆ ಕಾಂಪೌಂಡ್ ಗೋಡೆ ಮನೆ ಬಿದ್ದು ಬಾಲಕಿ ಜೀವಬಿಟ್ಟಿರೋ ಘಟನೆ ದೇರಳಕಟ್ಟೆ ಸಮೀಪದ ಮೊಂಟೆಪದವು ಕೋಡಿ ಎಂಬಲ್ಲಿ ನಡೆದಿದೆ.

ಕಾನಕರೆ ನಿವಾಸಿ ನೌಶಾದ್ ಎಂಬವರ ಪುತ್ರಿ ನಯೀಮ (7) ಮೃತ ಬಾಲಕಿ. ನೌಶಾದ ಅವರ ಮನೆಯ ಹಿಂಬದಿಯ ಕಾಂಪೌಂಡ್ ಗೋಡೆ ಕುಸಿದಿದೆ. ಆಗ ಮನೆ ಮೇಲೆ ಮಣ್ಣು ಬಿದಿದ್ದೆ. ಪರಿಣಾಮ ಮನೆಯ ಕಿಟಕಿ ಬಾಲಕಿಯ ಮೇಲೆ ಬಿದ್ದು ಗಂಭೀರ ಗಾಯಗೊಂಡ ಬಾಲಕಿ ನಯೀಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಪ್ರಾಣಬಿಟ್ಟಿದ್ದಾಳೆ.

ಮತ್ತೊಂದು ಕಡೆ ಮಂಡ್ಯ ಜಿಲ್ಲೆಯ ಕೆಆರ್‌ಪೇಟೆ ತಾಲೂಕಿನ ಗ್ರಾಮ ಮಡುವಿನಕೋಡಿ ಗ್ರಾಮದಲ್ಲಿ ನಿರಂತರ ಮಳೆಗೆ ಮನೆ ಕುಸಿದಿದೆ. ಕಳೆದ ಹದಿನೈದು ದಿನದಿಂದ ನಿರಂತರವಾಗಿ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಮಣ್ಣಿನ ಗೋಡೆ ಕುಸಿದಿದೆ. ಇದೇ ಘಟನೆಯಲ್ಲಿ ವೃದ್ದ ದಂಪತಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಂಗೇಗೌಡ, ಸಾಕಮ್ಮ ಎಂಬುವವರಿಗೆ ಸೇರಿದ ಮನೆ ಒಂದು ಭಾಗದಲ್ಲಿ ಗೋಡೆ ಕುಸಿದಿದ್ದರಿಂದ ಬಚಾವ್ ಆಗಿದ್ದಾರೆ. ಹೀಗಾಗಿ ವೃದ್ದ ದಂಪತಿ ಸೂಕ್ತ ಪರಿಹಾರಕ್ಕೆ ಒತ್ತಾಯಿಸುತ್ತಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!