spot_img
Wednesday, March 4, 2026
spot_img

ಜ್ಞಾನ ಸುಧಾದ ಕಾರ್ಯ ಪ್ರಶಂಸನೀಯ : ಸಂಸದ ಕೋಟ ಶ್ರೀನಿವಾಸ್ ಪೂಜಾರಿ |ಕಾರ್ಕಳ ಜ್ಞಾನಸುಧಾದ ಶ್ರೀ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವ

ಕಾರ್ಕಳ, ಗಣಿತನಗರ :ಡಾ.ಸುಧಾಕರ್ ಶೆಟ್ಟಿಯವರ ಪರಿಕಲ್ಪನೆಯಲ್ಲಿ ಜ್ಞಾನಸುಧಾ ಸಂಸ್ಥೆಯು ಉತ್ತಮ ಶಿಕ್ಷಣದ ಜೊತೆಯಲ್ಲಿ ದೇಶಪ್ರೇಮಿಗಳನ್ನು ನಿರ್ಮಿಸುತ್ತಿರುವ ಕಾರ್ಯ ಪ್ರಶಂಸನೀಯ. ಉತ್ತಮ ಫಲಿತಾಂಶದ ಮೂಲಕ ರಾಜ್ಯದ ಮಾದರಿ ಸಂಸ್ಥೆಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದಕೋಟ ಶ್ರೀನಿವಾಸ್ ಪೂಜಾರಿ ನುಡಿದರು.

ಅವರು ಕಾರ್ಕಳ ಜ್ಞಾನಸುಧಾದ ಶ್ರೀ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವದ ಸಂದರ್ಭ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಮೊದಲ ಹಂತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯಅಭ್ಯಾಗತರಾಗಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾರ್ಕಳ ಕ್ಷೇತ್ರದ ಶಾಸಕ ವಿ.ಸುನಿಲ್ ಕುಮಾರ್‍ರವರು ಮೌಲ್ಯಗಳನ್ನು ಕೊಡುವಲ್ಲಿ ಮತ್ತು ಸಂಸ್ಕಾರಕೊಡುವಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆ ಬಹಳ ದೊಡ್ಡ ಹೆಜ್ಜೆಯನ್ನಿಡುತ್ತಿದೆ ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಮಂಗಳೂರು ವಿ.ವಿಯ ಉಪಕುಲಪತಿಗಳಾದ ಪ್ರೊ.ಫೆಸರ್‍ಡಾ| ಪಿ.ಎಲ್.ಧರ್ಮ ಮಾತನಾಡಿ ಯುವಮನಸುಗಳಲ್ಲಿ ದೇಶಪ್ರೇಮವನ್ನು ತುಂಬುವಕಾರ್ಯದ ಜೊತೆಗೆ, ಜ್ಞಾನಸುಧಾ ಪರಿವಾರಅತ್ಯುತ್ತಮ ನಾಗರಿಕರನ್ನು ಸಮಾಜಕ್ಕೆಕೊಡುಗೆಯಾಗಿ ನೀಡುವಕಾರ್ಯದಲ್ಲಿತನ್ನನ್ನು ಅರ್ಪಿಸಿಕೊಂಡಿದೆ ಎಂದರು.

ಸೇನೆಗೆ ನೆರವು :ಇದೇ ಸಂದರ್ಭಅಪರೇಷನ್ ಸಿಂಧೂರ್ ಯಶಸ್ಸಿನ ಹಿನ್ನಲೆಯಲ್ಲಿಅಜೆಕಾರ್ ಪದ್ಮಗೋಪಾಲ್‍ಎಜ್ಯುಕೇಶನ್‍ಟ್ರಸ್ಟ್ ಹಾಗೂ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ವತಿಯಿಂದರೂ.2 ಲಕ್ಷ ಮೊತ್ತವನ್ನು ಭಾರತೀಯ ಸೇನೆಗೆ ದೇಣಿಗೆಯಾಗಿ ಸಂಸದರಾದಕೋಟ ಶ್ರೀನಿವಾಸ ಪೂಜಾರಿಯವರ ಮೂಲಕ ಹಸ್ತಾಂತರಿಸಲಾಯತು.

ಸಾಧಕರಿಗೆ ಸನ್ಮಾನ :
ಎಸ್.ಎಸ್.ಎಲ್.ಸಿ.ಯಲ್ಲಿ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮರ್ಯಾಂಕ್ ಗಳಿಸಿದ ಸ್ವಸ್ತಿ ಕಾಮತ್‍ಇವರಿಗೆ ಟ್ರಸ್ಟಿನ ವತಿಯಿಂದ ರೂ.2ಲಕ್ಷ ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.ಜೊತೆಗೆ ಕೆ.ಸಿ.ಇ.ಟಿ ಇಂಜಿನಿಯರಿಂಗ್ ವಿಭಾಗದಲ್ಲಿರಾಜ್ಯಕ್ಕೆ 6ನೇ ರ್ಯಾಂಕ್ ಗಳಿಸಿದ ತರುಣ್‍ಸುರಾನರನ್ನು, ಜೆ.ಇ.ಇ ಮೈನ್ ಬಿ.ಪ್ಲಾನಿಂಗ್ ವಿಭಾಗದಲ್ಲಿ 99.9855627 ಪರ್ಸಂಟೈಲ್ ಪಡೆದುಜನರಲ್ ವಿಭಾಗದಲ್ಲಿ 6ನೇ ಹಾಗೂ ಇ.ಡಬ್ಲು.ಎಸ್ ವರ್ಗದಲ್ಲಿ 1ನೇ ರ್ಯಾಂಕ್ ಮತ್ತು ಬಿ.ಆರ್ಕ್ ವಿಭಾಗದಲ್ಲಿ 99.8881752 ಪರ್ಸಂಟೈಲ್ (ಗಣಿತಶಾಸ್ತ್ರದಲ್ಲಿ 100 ಪರ್ಸಂಟೈಲ್) ಪಡೆದುಇ.ಡಬ್ಲು.ಎಸ್. ವರ್ಗದಲ್ಲಿ 6ನೇ ಮತ್ತುಜನರಲ್ ಮೆರಿಟ್ ವಿಭಾಗದಲ್ಲಿ 83ನೇ ರ್ಯಾಂಕ್ ಪಡೆದಮನೋಜ್‍ಕಾಮತ್‍ರವರನ್ನು,ಜೊತೆಗೆ ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿಯಸಾಧಕರನ್ನೂಅಭಿನಂದಿಸಲಾಯಿತು.

ಅಜೆಕಾರ್ ಪದ್ಮಗೋಪಾಲ್‍ಎಜ್ಯುಕೇಶನ್ ಟ್ರಸ್ಟಿನ ವತಿಯಿಂದ2024-25ರ ವಾರ್ಷಿಕ ಪರೀಕ್ಷೆಯ ಸಾಧಕ ವಿದ್ಯಾರ್ಥಿಗಳಿಗೆ ರೂ. 64 ಲಕ್ಷದ 22 ಸಾವಿರ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ರೂ.18 ಲಕ್ಷದ 78 ಸಾವಿರ, ಸಂಸ್ಥೆಯ ಉದ್ಯೋಗಿಗಳ ಮಕ್ಕಳ ಉಚಿತ ಶಿಕ್ಷಣಕ್ಕೆ ರೂ. 14 ಲಕ್ಷದ 87 ಸಾವಿರ, ಇಲಾಖಾ ಪರೀಕ್ಷೆಗಳಲ್ಲಿ ವಿದ್ಯಾರ್ಥಿ ಗಳಿಸುವ ಪ್ರತೀ ನೂರು ಅಂಕಗಳಿಗೆ ವಿದ್ಯಾರ್ಥಿಗೆ ಹಾಗೂ ಉಪನ್ಯಾಸಕರಿಗೆತಲಾರೂಒಂದು ಸಾವಿರದಂತೆರೂ. 7 ಲಕ್ಷದ 21 ಸಾವಿರವೂ ಸೇರಿದಂತೆಒಟ್ಟುರೂ.1 ಕೋಟಿ 5 ಲಕ್ಷದಷ್ಟು ವಿದ್ಯಾರ್ಥಿ ವೇತನವನ್ನು ನೀಡಲಾಯಿತು.

ಗೌರವಸನ್ಮಾನ :ಈ ವರ್ಷಸಂಸ್ಥೆಯಲ್ಲಿ ಹತ್ತು ವರ್ಷಗಳ ಸೇವೆ ಪೂರ್ಣಗೊಳಿಸಿದ 10 ಮಂದಿ ಬೋಧಕ-ಬೋಧಕೇತರ ಸಿಬ್ಬಂದಿವರ್ಗದವರಿಗೆತಲಾ 10ಸಾವಿರ ನಿಶ್ಚಿತ ಠೇವಣಿಯನ್ನು ನೀಡಲಾಯಿತು. ದೇವಸ್ಥಾನದಸೇವೆಯಲ್ಲಿ ತೊಡಗಿಸಿಕೊಂಡ ವೇದಮೂರ್ತಿ ಭಗೀರಥÀಭಟ್‍ಮತ್ತುಶ್ರೀ ವಿಷ್ಣು ಮೂರ್ತಿ ಭಟ್‍ರವರನ್ನು ಹಾಗೂ ಶ್ರೀ ಮಹಾಗಣಪತಿದೇವಾಸ್ಥಾನದ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀ ಕಮಲಾಕ್ಷ ನಾಯಕ್‍ರವರನ್ನುಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಇದೇ ಸಂದರ್ಭ 2011 ರಿಂದ 2025ರವರಗೆ ಜ್ಞಾನಸುಧಾ ಬೆಳೆದು ಬಂದದಾರಿಯ ಹೊತ್ತಗೆ‘ಅಗಣಿತ-ಸುಧಾಸ್ಪರ್ಷ’ವನ್ನು ಹಾಗೂ ಜ್ಞಾನಸುಧಾ ಪತ್ರಿಕೆ-39ನ್ನು ಬಿಡುಗಡೆಗೊಳಿಸಲಾಯಿತು.

ಅಜೆಕಾರ್ ಪದ್ಮಗೋಪಾಲ್‍ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದಡಾ.ಸುಧಾಕರ್ ಶೆಟ್ಟಿಯವರು ಪ್ರಾಸ್ತಾವವಿಕ ನುಡಿಗಳನ್ನಾಡಿ ಸ್ವಾಗತಿಸಿದರು.ಆಂಗ್ಲಭಾಷಾ ಉಪನ್ಯಾಸಕಿ ಶ್ರೀಮತಿ ಸಂಗೀತಾ ಕುಲಾಲ್ ನಿರೂಪಿಸಿ ವಂದಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!