spot_img
Thursday, March 5, 2026
spot_img

ರಾಜ್ಯದಲ್ಲಿ 125 ವರ್ಷಗಳಲ್ಲೇ ಇದೇ ಮೊದಲ ಬಾರಿಗೆ ಮೇ ತಿಂಗಳಲ್ಲಿ ಅತಿ ಹೆಚ್ಚು ಮಳೆ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಕಳೆದ 125 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮೇ ತಿಂಗಳಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾಗಿದೆ ಮತ್ತು 28 ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಇಂದು(ಶುಕ್ರವಾರ) ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ಗಳ ಸಿಇಒಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ, ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಸಂತ್ರಸ್ತರಿಗೆ ಅಗತ್ಯ ಪರಿಹಾರವನ್ನು ನೀಡುವಂತೆ ಸೂಚಿಸಿದರು.

“ಮಳೆ ಹಾನಿಗೆ ಪರಿಹಾರ ನೀಡಲು ಯಾವುದೇ ಹಣದ ಕೊರತೆಯಿಲ್ಲ. ಜಿಲ್ಲೆಗಳಲ್ಲಿ ಎಸ್‌ಡಿಆರ್‌ಎಫ್ ಅಡಿಯಲ್ಲಿ 1,000 ಕೋಟಿ ರೂ.ಗಳಿಗೂ ಹೆಚ್ಚು ಹಣ ಲಭ್ಯವಿದೆ” ಎಂದು ಸಿಎಂ ಅಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರೀ ಮಳೆಯಿಂದ ಮನೆಗಳಿಗೆ ಹಾನಿಯಾದರೆ ಪರಿಹಾರ ನೀಡಲು ಈಗಾಗಲೇ ಮಾರ್ಗಸೂಚಿಗಳನ್ನು ನೀಡಲಾಗಿದೆ. ತಕ್ಷಣ ಪರಿಹಾರ ನೀಡಬೇಕು” ಎಂದು ಅವರು ಹೇಳಿದರು.

ಭೂಕುಸಿತ ಸಂಭವಿಸುವ ಸಾಧ್ಯತೆ ಇರುವ ಸ್ಥಳಗಳಲ್ಲಿ, ಜನರನ್ನು ಸ್ಥಳಾಂತರಿಸುವುದು ಸೇರಿದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ಮಳೆಯಿಂದ ಮನೆ ಸಂಪೂರ್ಣವಾಗಿ ಹಾನಿಗೊಳಗಾದರೆ, ತಕ್ಷಣ 1.20 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ಕಳೆದ ವರ್ಷದಂತೆ ಮನೆ ಕಳೆದುಕೊಂಡ ಜನರಿಗೆ ಹೊಸ ಮನೆಗಳನ್ನು ಒದಗಿಸುವ ಮೂಲಕ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಅವರು ಸೂಚಿಸಿದರು.

ಪ್ರವಾಹ ವಿಪತ್ತನ್ನು ಎದುರಿಸಲು ಎಲ್ಲಾ ಗ್ರಾಮ ಪಂಚಾಯತ್ ಮಟ್ಟದಲ್ಲಿ ವಿವಿಧ ಇಲಾಖೆಗಳನ್ನು ಒಳಗೊಂಡ ಕಾರ್ಯಪಡೆ ರಚಿಸಲಾಗಿದೆ ಮತ್ತು ಅವರು ಸಮನ್ವಯದಿಂದ ಕೆಲಸ ಮಾಡಿದರೆ, ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂದವರು ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!