spot_img
Thursday, March 5, 2026
spot_img

S.S.L.C ಯಲ್ಲಿ ಶೇ.60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್‌ ನೀಡಿ : ಸಿಎಂ ಖಡಕ್‌ ಆದೇಶ

ಜನಪ್ರತಿನಿಧಿ (ಬೆಂಗಳೂರು) : ಡ್ರಾಪ್‌ಔಟ್ ತಡೆಯಲು ಏನೆಲ್ಲಾ ಸಾಧ್ಯವೋ ಎಲ್ಲವನ್ನೂ ಮಾಡಬೇಕು. ಡಿಡಿಪಿಐ ಗಳು, ಬಿಇಒ ಗಳು ಶಾಲೆಗಳಿಗೆ ಭೇಟಿ ನೀಡುತ್ತಿದ್ದಾರೆಯೇ? ಎನ್ನುವ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಗಮನಿಸಬೇಕು. ಪ್ರತೀ ವರ್ಷ ಸರ್ಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಕಡಿಮೆ ಆಗುತ್ತಿರುವುದು ಕೆಟ್ಟಬೆಳವಣಿಗೆ. ಸರ್ಕಾರ ಮೊಟ್ಟೆ, ಹಾಲು, ರಾಗಿಮಾಲ್ಟ್ ಸೂಪು, ಹಾಸ್ಟೆಲ್‌ ಸವಲತ್ತು ಎಲ್ಲಾ ಕೊಟ್ಟು ಮಕ್ಕಳ ದಾಖಲಾತಿ ಪ್ರಮಾಣ ಏಕೆ ಕಡಿಮೆ ಆಗುತ್ತಿದೆ? ಇದನ್ನು ಸುಧಾರಿಸುವ ನಿಟ್ಟಿನಲ್ಲಿ ನಿಮ್ಮ ಪ್ರಾಯೋಗಿಕ ಅನುಭವಗಳು ಏನು? ಎಂದು ಸಿಎಂ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಹಾಗೂ ಸಿಇಒ ಗಳ ಜೊತೆ ನಡೆದ ಸಭೆಯಲ್ಲಿ ಕಟುವಾಗಿಯೇ ಪ್ರಶ್ನಿಸಿದರು.

ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವುದನ್ನು ಗಮನದಲ್ಲಿಡಿ. ಡಿಡಿಪಿಐ ಗಳು ಜಿಲ್ಲಾಕೇಂದ್ರದಲ್ಲಿ ಕುಳಿತು ಕೆಲಸ ಮಾಡುವುದಲ್ಲ. ಇಡೀ ಜಿಲ್ಲೆಯ ಪ್ರಯಾಣ ಮಾಡಬೇಕು. ಸಿಇಒ ಗಳು ಕಡ್ಡಾಯವಾಗಿ ಈ ಬಗ್ಗೆ ನಿಗಾ ವಹಿಸಿ ಪೋಷಕರ ಜೊತೆ ಸಭೆ ನಡೆಸಿ ಚರ್ಚಿಸಲೇಬೇಕು. ಎಸ್‌ಎಸ್‌ಎಲ್‌ಸಿ ಯಲ್ಲಿ ಫಲಿತಾ೦ಶ ಕಡಿಮೆ ಬರುವುದಕ್ಕೆ ಶಿಕ್ಷಕರ ಕೊರತೆ, ಸಿಬ್ಬಂದಿ ಕೊರತೆ ಎನ್ನುವ ನೆಪ ಹೇಳಬೇಡಿ. ದಕ್ಷಿಣ ಕನ್ನಡ ಮತ್ತು ಇತರೆ ಜಿಲ್ಲೆಗಳಲ್ಲಿ ಮಾತ್ರ ಉತ್ತಮ ಫಲಿತಾಂಶ ಬರುತ್ತಿದೆ. ಬೇರೆ ಜಿಲ್ಲೆಗಳು ಏಕೆ ಹಿಂದುಳಿದಿವೆ? ಎಂದು ಪ್ರಶ್ನಿಸಿದರು.

ಡಿಡಿಪಿಐಗಳು ಫಲಿತಾಂಶದ ಜವಾಬ್ದಾರಿ ತೆಗೆದುಕೊಳ್ಳಬೇಕು. ಡಿಡಿಪಿಐಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಶಿಕ್ಷಕರು ಆಸಕ್ತಿಯಿಂದ ಕೆಲಸ ಮಾಡುತ್ತಿದ್ದಾರೋ ಇಲ್ಲವೋ ಎನ್ನುವುದನ್ನು ಪರಿಶೀಲನೆ ನಡೆಸಬೇಕು. ಶಿಕ್ಷಕರು ಮತ್ತು ಡಿಡಿಪಿಐ ಗಳು ಆಸಕ್ತಿಯಿಂದ ಕೆಲಸ ಮಾಡಿದರೆ ಉತ್ತಮ ಫಲಿತಾಂಶ ಎಲ್ಲಾ ಕಡೆ ಬರುತ್ತದೆ. ಇದನ್ನು ಬಿಟ್ಟು ಇಲ್ಲಸಲ್ಲದ ನೆಪ ಹೇಳಬೇಡಿ ಎಂದು ಸಿಎಂ ಕಟುವಾಗಿಯೇ ಹೇಳಿದರು.

ವಿವೇಕ ಯೋಜನೆಯಡಿಯಲ್ಲಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಹಣ ಮಂಜೂರು ಮಾಡುವುದರಲ್ಲಿ ವಿಳಂಬ ಆಗಬಾರದು. ಕ್ರಿಯಾ ಯೋಜನೆ ತಕ್ಷಣ ತಕ್ಷಣ ಸಿದ್ದಪಡಿಸಬೇಕು. ಹಣ ಬಿಡುಗಡೆ ಆಗಿದ್ದರೂ ಇನ್ನೂ ಶಾಲಾ ಕೊಠಡಿಗಳ ನಿರ್ಮಾಣ ಆಗದಿರುವ ಬಗ್ಗೆ ಜಿಲ್ಲಾಧಿಕಾರಿಗಳು ಉತ್ತರಿಸಬೇಕು. ಪರೀಕ್ಷಾ ಫಲಿತಾಂಶದಲ್ಲಿ ಮತ್ತು ಮಕ್ಕಳ ದಾಖಲಾತಿಯಲ್ಲಿ ರಾಜ್ಯದ ಸರಾಸರಿಗಿಂತ ಶೇಕಡಾವಾರು ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳು ಮುಂದಿನ ಶೈಕ್ಷಣಿಕ ಸಾಲಿನ ಹೊತ್ತಿಗೆ ಪರಿಸ್ಥಿತಿ ಉತ್ತಮಗೊಳ್ಳಬೇಕು ಎಂದು ಸೂಚಿಸಿದರು.

ಕಲ್ಯಾಣ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಜಿಲ್ಲೆಗಳ ಸಿಇಓ ಗಳು ಹೆಚ್ಚಿನ ಆಸಕ್ತಿ ಕೊಟ್ಟು ಈ ಬಗ್ಗೆ ನಿಗಾ ಇಡಬೇಕು. ಫಲಿತಾಂಶ ಕಡಿಮೆ ಇರುವುದಕ್ಕೆ ಕಾರಣಗಳು, ನೆಪಗಳು ಮುಖ್ಯ ಅಲ್ಲ, ಫಲಿತಾಂಶ ತರುವುದು ಮುಖ್ಯ. ಪ್ರಾಮಾಣಿಕ ಪ್ರಯತ್ನ ಇದ್ದರೆ ಪ್ರಾಮಾಣಿಕ ಫಲಿತಾ೦ಶ ಬರುತ್ತದೆ. ಎಸ್.ಎಸ್.ಎಲ್.ಸಿ ಯಲ್ಲಿ ಶೇ.60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್‌ ನೀಡಬೇಕು, ನೋಟಿಸ್ ಗೆ ಕೊಟ್ಟ ಉತ್ತರ ಸಮರ್ಪಕ ಅನ್ನಿಸದಿದ್ದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!