spot_img
Thursday, March 5, 2026
spot_img

ಬಕ್ರಿದ್‌ : ಅಕ್ರಮ ಗೋ ಹತ್ಯೆ-ಗೋವುಗಳ ಸಾಗಾಟಕ್ಕೆ ಸರ್ಕಾರ ಬ್ರೇಕ್, ಸಮಿತಿ ರಚನೆ

ಜನಪ್ರತಿನಿಧಿ (ಬೆಂಗಳೂರು) : ಮುಸ್ಲಿಂ ಬಾಂಧವರು ತ್ಯಾಗದ ಸಂಕೇತವಾಗಿ ಆಚರಿಸುವ ಬಕ್ರೀದ್ ಹಬ್ಬಕ್ಕೆ ಇನ್ನು ಕೆಲವೇ ದಿನಗಲು ಬಾಕಿಯಿದ್ದು, ಈ ನಡುವಲ್ಲೇ ಗೋ ಹತ್ಯೆ-ಗೋವುಗಳ ಅಕ್ರಮ ಸಾಗಾಟ ತಡೆಯಲು ರಾಜ್ಯ ಸರ್ಕಾರ ಮುಂದಾಗಿದ್ದು, ಬೆಂಗಳೂರು ನಗರ ಉಪ ಆಯುಕ್ತರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದೆ.

ಗೋವು ಮತ್ತು ಒಂಟೆಗಳನ್ನು ವಧೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, 13 ವರ್ಷಕ್ಕಿಂತ ಮೇಲ್ಪಟ್ಟ ಕುರಿ, ಮೇಕೆ ಮತ್ತು ಎಮ್ಮೆಗಳನ್ನು ಮಾತ್ರ ವಧೆ ಮಾಡಲು ಅವಕಾಶವಿದೆ ಎಂದು ಬಿಬಿಎಂಪಿ ಈಗಾಗಲೇ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.

ಆರ್‌ಟಿಒ, ಸಾರಿಗೆ ಇಲಾಖೆ, ಪೊಲೀಸ್ ಮತ್ತು ಪುರಸಭೆಯ ಅಧಿಕಾರಿಗಳು ಪ್ರಾಣಿಗಳ ಸಾಗಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಯಾರಾದರೂ ಜಾನುವಾರುಗಳನ್ನು ವಧೆ ಮಾಡುತ್ತಿರುವುದು ಕಂಡುಬಂದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಗೋವು ಅಥವಾ ಒಂಟೆಗಳನ್ನು ಅಕ್ರಮವಾದಿ ಸಾಗಾಟ ಮಾಡುತ್ತಿರುವುದು ಕಂಡು ಬಂದರೆ ಪ್ರಾಣಿಗಳನ್ನು ವಶಪಡಿಸಿಕೊಳ್ಳಲಾಗುತ್ತದೆ ಮತ್ತು ಪ್ರಕರಣಗಳನ್ನು ದಾಖಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!