spot_img
Thursday, March 5, 2026
spot_img

ಉತ್ತಮ ಗುಣಮಟ್ಟದ ಬೋಧನೆ ಮಾಡಲು ಶಿಕ್ಷಕರಿಗೆ ತರಬೇತಿ ಅಗತ್ಯ-ಡಾ.ರಮೇಶ ಶೆಟ್ಟಿ | ವಿದ್ಯಾರಣ್ಯದಲ್ಲಿ ಶಿಕ್ಷಕರ ತರಬೇತಿ ಶಿಬಿರ ಸಮಾರೋಪ

ಕುಂದಾಪುರ: “ಶಿಕ್ಷಣ ನಿಂತ ನೀರಲ್ಲ. ಪ್ರತೀ ದಿನವೂ ಹೊಸ ಹೊಸ ಬದಲಾವಣೆಯೊಂದಿಗೆ ನವೀನ ಚಿಂತನೆಗಳೊಂದಿಗೆ ಸಾಗುತ್ತಿದೆ.ಒಂದು ಸುಭದ್ರವಾದ ದೇಶದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದುದು. ಉತ್ತಮವಾದ ಶಿಕ್ಷಕ ಮಾತ್ರ ಅತ್ಯುತ್ತಮವಾದ ವಿದ್ಯಾರ್ಥಿಗಳನ್ನು ಸೃಷ್ಟಿಸಲು ಸಾಧ್ಯವಾದ್ದರಿಂದ ಈ ಸಮಾಜವು ಯಾವಾಗಲೂ ಸಮರ್ಥವಾದ ಶಿಕ್ಷಕ ವರ್ಗವನ್ನು ಸದಾ ನಿರೀಕ್ಷಿಸುತ್ತದೆ. ಹಾಗಾಗಿ ಶಿಕ್ಷಕರಿಗೆ ಕಾಲ ಕಾಲಕ್ಕೆ ಅಗತ್ಯವಾದ ತರಬೇತಿಗಳನ್ನು ನೀಡಿದಾಗ ಶಿಕ್ಷಕರು ಬೋಧನೆಗೆ ಸಂಬಂಧಿಸಿದ ಹಲವಾರು ಕೌಶಲಗಳನ್ನು ಪಡೆದು ಉತ್ತಮ ಗುಣಮಟ್ಟದ ಬೋಧನೆ ಮಾಡಲು ಸಾಧ್ಯವಾಗಿ ಮಕ್ಕಳು ಕಲಿಕೆಯಲ್ಲಿ ಸರ್ವಾಂಗೀಣ ಪ್ರಗತಿ ಹೊಂದಲು ಸಾಧ್ಯವಾಗುತ್ತದೆ” ಎಂದು ಸುಜ್ಞಾನ್ ಎಜುಕೇಷನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ ಹೇಳಿದರು.

ಅವರು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮೂರು ದಿನಗಳು ನಡೆದ ಶಿಕ್ಷಕರ ತರಬೇತಿ ಕಾರ್ಯಾಗಾರದಲ್ಲಿ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮೇ ೨೬,೨೭ ಮತ್ತು ೨೮ರಂದು ನಡೆದ ಮೂರು ದಿನಗಳ ತರಬೇತಿ ಕಾರ್ಯಾಗಾರದಲ್ಲಿ ಶಿಕ್ಷಕರಿಗೆ ಬೋಧನೆಗೆ ಅಗತ್ಯವಾದ ಕೌಶಲಗಳನ್ನು ಕಲಿಸಲಾಯಿತು.

ಮೊದಲ ದಿನದ ಕಾರ್ಯಾಗಾರದಲ್ಲಿ ಪ್ರೀಲ್ಯಾನ್ಸ್ ಅಕಾಡೆಮಿಕ್ ಕೌನ್ಸಿಲ್ ಕನ್ಸಲ್ಟೆಂಟ್ ಅಂಡ್ ಸಾಫ್ಟ್ ಸ್ಕಿಲ್ಸ್ ತರಬೇತುದಾರರಾಗಿರುವ ಶ್ರೀಮತಿ ಅರುಣ ಎಸ್.ಅವರು ಶಿಕ್ಷಕರಿಗೆ “ಯಶಸ್ವಿ ತರಗತಿ ನಿರ್ವಹಣೆಯ ಕೌಶಲ”ಗಳನ್ನು ಪರಿಚಯಿಸಿದರು. ಎರಡು ಮತ್ತು ಮೂರನೇ ದಿನದ ಕಾರ್ಯಾಗಾರದಲ್ಲಿ ರಾಜ್ಯ ಮಟ್ಟದ ತರಬೇತುದಾರರಾದ ಅಶೋಕ್ ತೆಕ್ಕಟ್ಟೆ ಅವರು ಶಿಕ್ಷಕರಿಗೆ “ಇಂಗ್ಲಿಷ್ ಭಾಷಾ ಕೌಶಲಗಳು”ಕುರಿತು ತರಬೇತಿ ನೀಡಿದರು. ಮೂರು ದಿನಗಳು ನಡೆದ ಕಾರ್ಯಾಗಾರದಲ್ಲಿ ಶಿಕ್ಷಕ-ಶಿಕ್ಷಕಿಯರು ಬಹಳ ಉತ್ಸುಕತೆಯಿಂದ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯ ಶಿಕ್ಷಕ ಪ್ರದೀಪ್ ಉಪಸ್ಥಿತರಿದ್ದರು.ಶಿಕ್ಷಕಿ ಅಕ್ಷತಾ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!