spot_img
Thursday, March 5, 2026
spot_img

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪೋಷಕರ ಸಭೆ: ರಾಜ್ಯ ಮಟ್ಟದ 22 ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಕುಂದಾಪುರ: ಮೇ 31 ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿ ಯಾಗಿ ಶಿಕ್ಷಕರು ಹಾಗೂ ರಾಷ್ಟ್ರ ಮಟ್ಟದ ವ್ಯಕ್ತಿತ್ವ ವಿಕಸನದ ತರಬೇತುದಾರ ರಾದ ರಾಜೇಂದ್ರ ಭಟ್. ಕೆ. ಪೋಷಕರನ್ನು ಉದ್ದೇಶಿಸಿ, ಪೋಷಕರು ತಮ್ಮ ಮಕ್ಕಳನ್ನು ಅತ್ಯುತ್ತಮ ರೀತಿಯಲ್ಲಿ ಬೆಳೆಸುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು. ಮಕ್ಕಳು ಹೃದಯ ಶ್ರೀಮಂತಿಗೆ ಬೆಳೆಸಿಕೊಳ್ಳುವಂತೆ ಮಾಡಿ, ಮಗುವಿನಲ್ಲಿ ಅಂಕ ಪಡೆಯುವುದಕ್ಕಿಂತ ಮುಖ್ಯವಾಗಿರುವುದು ಮಾನವೀಯ ಮೌಲ್ಯ. ಒತ್ತಡ ರಹಿತವಾಗಿ ಬದುಕುವ ವಾತಾವರಣ ವನ್ನು ಸೃಷ್ಟಿಸಿ ಎಂದು ಪೋಷಕರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಟಾಪ್ 10 ಸ್ಥಾನ ದಲ್ಲಿ rank ಪಡೆದ ಹಾಗೂ ಕೆ- ಸಿ ಇ ಟಿ ಯಲ್ಲಿ 5000 ಒಳಗಡೆ rank ಪಡೆದ ಒಟ್ಟು 22 ವಿದ್ಯಾರ್ಥಿಗಳನ್ನು ಪೋಷಕರ ಸಮ್ಮುಖದಲ್ಲಿ ಬೆಳ್ಳಿಲೋಟ, ಬೆಳ್ಳಿ ನಾಣ್ಯ, ಫಲ, ಪುಷ್ಪ, ಶಾಲು ಹೊದಿಸಿ ಸನ್ಮಾನಿಸಲಾಯಿತು.

ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ ಎಂಡ್ ಕಲ್ಚರಲ್ ಟ್ರಸ್ಟ್ ನ ಅಧ್ಯಕ್ಷರಾದ ಕೆ. ರಾಮಕೃಷ್ಣ ಕಾಮತ್
ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಸಂಸ್ಥೆಯ ಕಾರ್ಯದರ್ಶಿ  ಕೆ. ರಾಧಾ ಕೃಷ್ಣ ಶೆಣೈ, ಖಜಾಂಚಿ ಶ್ರೀ ಲಕ್ಷ್ಮಿ ನಾರಾಯಣ ಶೆಣೈ, ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಹಿರಿಯ ರಸಾ ಯನ ಶಾಸ್ತ್ರ ಉಪನ್ಯಾಸಕರರಾದ ರಮಾಕಾಂತ್ ರೇವಣ್ ಕರ್, ಶ್ರೀ ವೆಂಕಟರಮಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪ್ರಮೀಳಾ ಡಿಸೋಜಾ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಪ್ರಸಕ್ತ ಶೈಕ್ಷಣಿಕ ಚಟುವಟಿಕೆ ಗಳ ಕುರಿತು ಪೋಷಕರಿಗೆ ಮಾಹಿತಿ ನೀಡಿದರು.
ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್ ಸ್ವಾಗತಿಸಿದರು.

ಭೌತ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಭರತ ಚಂದ್ರ ಕೆ ವಂದಿಸಿ, ಅರ್ಥಶಾಸ್ತ್ರ ಉಪನ್ಯಾಸಕರಾದ ಮಂಜುನಾಥ್ ಅತಿಥಿಯನ್ನು ಪರಿಚಯಿಸಿದರು. ಇಂಗ್ಲೀಷ್ ಉಪನ್ಯಾಸಕಿ ಅಮೃತಾ ಸನ್ಮಾನಿತರ ಪಟ್ಟಿ ಯನ್ನು ವಾಚಿಸಿದರು. ಕನ್ನಡ ಉಪನ್ಯಾಸಕಿ ಸುನೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!