spot_img
Thursday, March 5, 2026
spot_img

ಹೆಸಕುತ್ತೂರು: ಶಾಲಾ ಪ್ರಾರಂಭೋತ್ಸವ, ಉಚಿತ ಪಠ್ಯಪುಸ್ತಕ ವಿತರಣೆ

ಕುಂದಾಪುರ: “ಎಲ್ಲಾ ವಿದ್ಯಾರ್ಥಿಗಳು ಪಠ್ಯ ಮತ್ತು ಸಹಪಠ್ಯ ಚಟುವಟಿಕೆಗಳಲ್ಲಿ ಉತ್ಸಾಹದಿಂದ, ಆಸಕ್ತಿಯಿಂದ ಭಾಗವಹಿಸಬೇಕು” ಎಂದು ಕೊರ್ಗಿ ಗ್ರಾಮ ಪಂಚಾಯತ್ ಸದಸ್ಯರಾದ ರಾಘವೇಂದ್ರ ಶೆಟ್ಟಿ ನುಡಿದರು.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸಕುತ್ತೂರಿನಲ್ಲಿ ನಡೆದ ಶಾಲಾ ಪ್ರಾರಂಭೋತ್ಸವ ಮತ್ತು ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಹೊಸ ಶೈಕ್ಷಣಿಕ ವರ್ಷಕ್ಕೆ ಮಕ್ಕಳಿಗೆ ಶುಭ ಹಾರೈಸಿದರು.

ಪ್ರತಿ ವಿದ್ಯಾರ್ಥಿಗಳನ್ನು ಬಣ್ಣ ಬಣ್ಣದ ಬಲೂನನ್ನು ನೀಡಿ ಎಸ್.ಡಿ.ಎಂಸಿಯ ಸರ್ವ ಸದಸ್ಯರು ವಿದ್ಯಾರ್ಥಿಗಳಿಗೆ ಪುಷ್ಪಾರ್ಚನೆಯೊಂದಿಗೆ ಮಕ್ಕಳನ್ನು ಶಾಲೆಗೆ ಸ್ವಾಗತಿಸಿಕೊಂಡರು. ಆನಂತರ ವಿದ್ಯಾರ್ಥಿಗಳಿಗಾಗಿ ವಿಶೇಷವಾಗಿ ಸಿದ್ಧಪಡಿಸಲಾದ ಸೆಲ್ಫಿ ಕಾರ್ನರ್ ನಲ್ಲಿ ಪೇಪರ್ ಕಿರೀಟ ಹಾಕಿಕೊಂಡು, ಬಲೂನು ಹಿಡಿದು ಸೆಲ್ಫಿ ಫೋಟೋ ತೆಗೆಸಿಕೊಂಡು ೨೦೨೫-೨೬ರ ಮೊದಲ ಶಾಲಾ ದಿನವನ್ನು ಸ್ಮರಣೀಯವಾಗಿಸಿಕೊಂಡರು. ಆ ಬಳಿಕ ಸರಕಾರದಿಂದ ಉಚಿತವಾಗಿ ಕೊಡಲಾಗುವ ಪಠ್ಯಪುಸ್ತಕವನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ವಿದ್ಯಾರ್ಥಿಗಳಿಗೆ ಸಿಹಿಯೂಟದ ವ್ಯವಸ್ಥೆ ಮಾಡಲಾಗಿತ್ತು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಕೃಷ್ಣ ಕೆದ್ಲಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಅಶೋಕ ಮೊಗವೀರ, ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಆಶಾ ಕುಲಾಲ, ಎಸ್.ಡಿ.ಎಂ.ಸಿ ಸದಸ್ಯರಾದ ಸುವಾಸಿನಿ ಶೆಟ್ಟಿ, ಉಷಾ , ರವಿ ಮೊಗವೀರ, ರವಿ ಆಚಾರ್, ರಾಜು ಮೊಗವೀರ, ಜಯಂತಿ, ನೇತ್ರಾವತಿ, ಗೀತಾ ಸಹ ಶಿಕ್ಷಕರಾದ ಅಶೋಕ್ ತೆಕ್ಕಟ್ಟೆ, ವಿಜಯ ಶೆಟ್ಟಿ, ಸ್ವಾತಿ ಬಿ, ಗೌರವ ಶಿಕ್ಷಕಿ ಮಧುರ ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯರಾದ ಶೇಖರ ಕುಮಾರ ಸ್ವಾಗತಿಸಿದರು. ಸಹ ಶಿಕ್ಷಕಿ ವಿಜಯ ಆರ್ ವಂದಿಸಿದರು. ಸಹ ಶಿಕ್ಷಕ ರವೀಂದ್ರ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!