spot_img
Friday, March 6, 2026
spot_img

ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ: ಶಾಲಾ ಪ್ರಾರಂಭೋತ್ಸವ

ವಂಡ್ಸೆ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ ಇಲ್ಲಿ ಮೇ 31 ರಂದು ಶಾಲಾ ಪ್ರಾರಂಭೋತ್ಸವವನ್ನು ಆಚರಿಸಲಾಯಿತು.
ಸಂಗೀತ ವಾದ್ಯಗಳ ಘೋಷದೊಂದಿಗೆ ವಿದ್ಯಾರ್ಥಿಗಳಿಗೆ ಪುಷ್ಪವೃಷ್ಟಿಯ ಮೂಲಕ ಹೊಸ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳನ್ನು ಸ್ವಾಗತಿಸಿಕೊಳ್ಳಲಾಯಿತು. ಇದೇ ಸಂದರ್ಭದಲ್ಲಿ ಪುಟಾಣಿ ಮಕ್ಕಳಿಗೆ ಗ್ರಾಮ ಪಂಚಾಯತ್ ವತಿಯಿಂದ ನೀಡಿದ ಹೊಸ ಸೈಕಲ್‌ನಲ್ಲಿ ಸವಾರಿ ಮಾಡಿಸುವುದರ ಮೂಲಕ ಪುಟಾಣಿಗಳು ಶಾಲಾ ಆವರಣ ಪ್ರವೇಶ ಮಾಡಿದರು.

ಶ್ರೀ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಮಕ್ಕಳಿಗೆ ಶುಭ ಹಾರೈಸಿದರು. ವಂಡ್ಸೆ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ನಾಗರಾಜ ಶೆಟ್ಟಿ ಮಕ್ಕಳಿಗೆ ಶೈಕ್ಷಣಿಕ ವರ್ಷಕ್ಕೆ ಸ್ವಾಗತ ಕೋರುವವರೊಂದಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಇಂಡಿಯನ್ ಟ್ಯಾಲೆಂಟ್ ಒಲಂಪಿಯಾಡ್ ಪರೀಕ್ಷೆಯಲ್ಲಿ Rank  ಗಳಿಸಿದ ವಿದ್ಯಾರ್ಥಿಗಳಿಗೆ ಪದಕ ಹಾಗೂ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಾಲಾ ಸಹ ಶಿಕ್ಷಕಿ ಶ್ರೀಮತಿ ನಾಗವೇಣಿ Rank ಪಡೆದ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಅತಿಥಿ ಗಣ್ಯರಿಂದ Rank ವಿಜೇತರಿಗೆ ಪದಕ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷ ರಾಜೀವ, ಸದಸ್ಯರು ಹಾಗೂ ಶಾಲೆಯ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಸೋಮರಾಯ ಜನ್ನು ಸ್ವಾಗತಿಸಿದರು. ಶಾಲಾ ವಿಜ್ಞಾನ ಸಹ ಶಿಕ್ಷಕ ಸುಧಾಕರ್ ಮರಕಾಲ ವಂದಿಸಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ರಾಜು. ಎನ್ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದ ವಿಡಿಯೋ ವೀಕ್ಷಿಸಿ

https://www.facebook.com/share/v/199Q1xQW6Q/

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!