spot_img
Monday, March 16, 2026
spot_img

ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ | ಬೂಕರ್‌ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್, ದೀಪಾ ಭಸ್ತಿ ಅವರನ್ನು ಸನ್ಮಾನಿಸಿ ಸಿಎಂ ಸಿದ್ದರಾಮಯ್ಯ ಅಭಿಮತ

ಜನಪ್ರತಿನಿಧಿ (ಬೆಂಗಳೂರು) : ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ.  ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು. ಬಾನು ಮುಷ್ತಾಕ್ ಅವರು ನಮ್ಮ ಭಾಷೆಗೆ ಬೂಕರ್ ಒದಗಿಸಿಕೊಡುವ ಮೂಲಕ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ. ಇದು ಇಡೀ ಕನ್ನಡ ನಾಡು ಹೆಮ್ಮೆ‌ಪಡುವ ಕ್ಷಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಎದೆಯ ಹಣತೆ ಕೃತಿಗಾಗಿ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿಗೆ ಭಾಜನರಾದ ಸಾಹಿತಿ ಬಾನು ಮುಷ್ತಾಕ್ ಹಾಗೂ ಕೃತಿಯ ಅನುವಾದಕಿ ದೀಪಾ ಭಸ್ತಿ ಅವರನ್ನು ಸನ್ಮಾನಿಸಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ತಮ್ಮ ಕತೆಗಳ ಮೂಲಕ ಮತ್ತು ಅನುವಾದದ ಮೂಲಕ ಕನ್ನಡಕ್ಕೆ ಕೀರ್ತಿ ತಂದ ಬಾನು ಮುಷ್ತಾಕ್, ದೀಪಾ ಭಸ್ತಿ ಅವರಿಗೆ ಸರ್ಕಾರದಿಂದ ತಲಾ ₹10 ಲಕ್ಷ ಪುರಸ್ಕಾರ ನೀಡಲಾಗುವುದು. ಇದರ ಜೊತೆಗೆ ಬಾನು ಅವರ ಕತೆಗಳನ್ನು ಇಂಗ್ಲಿಷ್ ಗೆ ಪ್ರಕಟಿಸಲು, ಅನುವಾದಕ್ಕೂ ಸರ್ಕಾರದ ನೆರವು ನೀಡಲಾಗುವುದು ಎಂದು ಅವರು ಭರವಸೆ ನೀಡಿದ್ದಲ್ಲದೇ, ಪತ್ರಕರ್ತೆಯಾಗಿ, ಲೇಖಕಿಯಾಗಿ, ವಕೀಲರಾಗಿ, ಹೋರಾಟಗಾರ್ತಿಯಾಗಿ ಸಮಾಜದಲ್ಲಿ ತೊಡಗಿಸಿಕೊಂಡಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಯ ಶಕ್ತಿ ಎಂದವರು ಶ್ಲಾಘಿಸಿದರು.

ಲಂಕೇಶ್ ಪತ್ರಿಕೆಯಲ್ಲಿ ಪತ್ರಕರ್ತೆಯಾಗಿ ಬರೆಯುತ್ತಲೇ, ವಕೀಲೆಯಾಗಿ ಬಡವರ ಪರ ವಕಾಲತ್ತು ವಹಿಸುತ್ತಾ, ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಲಭಿಸಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಗಳಲ್ಲಿ ಸಮಾಜಮುಖಿ ಸತ್ವ ಇದೆ ಎನ್ನುವುದಕ್ಕೆ ಸಾಕ್ಷಿ. ಮುಸ್ಲಿಂ ಸಮುದಾಯದ ಹೆಣ್ಣು‌ಮಕ್ಕಳ ಧ್ವನಿಯಾಗಿ ಮೌಡ್ಯ ವಿರೋಧಿಸಿ ಬರೆಯುವ ಪ್ರಗತಿಪರ ಎದೆಗಾರಿಕೆ ಬಾನು ಅವರಲ್ಲಿದೆ. ಸಾಹಿತ್ಯದ ಮೂಲಕ ಮಾನವೀಯ ಸಂದೇಶ ನೀಡುವ ಜವಾಬ್ದಾರಿ ಬಾನು ಮುಷ್ತಾಕ್ ಅವರು ನಿರ್ವಹಿಸಿದ್ದಾರೆ.ಕವಿರಾಜಮಾರ್ಗದಲ್ಲಿ ಪರಧರ್ಮ ಮತ್ತು ಪರ ವಿಚಾರಗಳನ್ನು ಸಹಾನುಭೂತಿಯಿಂದ ನೋಡಬೇಕು ಎಂದು ಕರೆ ನೀಡಿದ್ದರೆ, ಆದಿಕವಿ ಪಂಪ ಅವರು ಮನುಷ್ಯ ಜಾತಿ ತಾನೊಂದೇ ವಲಂ ಎಂದಿದ್ದಾರೆ, ಬಸವಣ್ಣನವರು “ಇವ ನಮ್ಮವ” ಎಂದು ಹೇಳಿದ್ದಾರೆ. ಹೆಣ್ಣಿನ ಧ್ವನಿಯಾದ ಅಕ್ಕಮಹಾದೇವಿ ಅವರೂ ಇದನ್ನೇ ಧ್ವನಿಸಿದ್ದಾರೆ. ಇವರೆಲ್ಲರ ಆಶಯಗಳ ಮುಂದುವರಿಕೆಯಾಗಿ ಬಾನು ಮುಷ್ತಾಕ್ ಕೆಲಸ ಮಾಡಿದ್ದಾರೆ ಎಂದು ಅವರು ಹೇಳಿದರು.

ಇಂಥದ್ದೊಂದು ಮೇರು ಪ್ರಶಸ್ತಿಗೆ ಭಾಜನರಾದ ಬಾನು ಅವರನ್ನು ಸನ್ಮಾನಿಸುವುದು ಕನ್ನಡಿಗನಾಗಿ ನನಗೆ ಸಂತೋಷದ ವಿಷಯ. ಇಂತಹ ಇನ್ನಷ್ಟು ಬರಹಗಳು ಅವರಿಂದ ಹೊರಬರಲಿ ಎಂದು ಅವರು ಹಾರೈಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!