spot_img
Monday, March 16, 2026
spot_img

ಪುತ್ತೂರು | ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಅವರಿಗೆ ಗಡಿಪಾರು ನೋಟೀಸ್‌

ಜನಪ್ರತಿನಿಧಿ (ದಕ್ಷಿಣ ಕನ್ನಡ) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆ ಬೆನ್ನಲ್ಲೇ ಇದೀಗ ಪೊಲೀಸರು ಹಿಂದೂ ಮುಖಂಡರ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ಈ ಕಠಿಣ ಕ್ರಮದ ಭಾಗವಾಗಿ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಗಡೀಪಾರು ನೋಟಿಸ್ ಜಾರಿ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡೀಪಾರು ಮಾಡಿ ನೋಟಿಸ್​​ನಲ್ಲಿ ಆದೇಶಿಸಲಾಗಿದೆ.

ನೋಟಿಸ್​ ನಲ್ಲೇನಿದೆ ?

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕೃಷ್ಣಯ್ಯ ಎಂಬವರ ಮಗ ಆರುಣ್ ಕುಮಾರ್ ಪುತ್ತಿಲ ಎಂಬಾತನ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ: 55 ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡೀಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಯನ್ನು ದಿನಾಂಕ: 06-06-2025 ರಂದು ನಿಗದಿಪಡಿಸಲಾಗಿದೆ. ಸದ್ರಿ ವಿಚಾರಣೆಗೆ ತಪ್ಪದೇ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೀಡಿರುವ ನೋಟಿಸ್​​​ನಲ್ಲಿ ಉಲ್ಲೇಖಿಸಲಾಗಿದೆ.

‘ಈ ಪ್ರಕರಣದಲ್ಲಿ ನೀವು (ಪುತ್ತಿಲ) ಸ್ವತಃ ಅಥವಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ಈ ಮೂಲಕ ನಿಮಗೆ ತಿಳಿಸಲಾಗಿದೆ. ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ನಿಮಗೆ ಆಸಕ್ತಿ ಇಲ್ಲವೇಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಸಹ ನೋಟಿಸ್​​ನಲ್ಲಿ ಉಲ್ಲೇಖಿಸಲಾಗಿದೆ.

ಅರುಣ್ ಪುತ್ತಿಲಗೆ ಯಾವ ಕಾರಣಕ್ಕೆ ಗಡಿಪಾರು ನೋಟಿಸ್ ನೀಡಲಾಗಿದೆ ಎಂಬುದನ್ನು ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೋಟಿಸ್​​ನಲ್ಲಿ ಉಲ್ಲೇಖಿಸಿಲ್ಲ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!