spot_img
Monday, March 16, 2026
spot_img

ರೌಡಿ ಶೀಟರ್‌ ಸುಹಾಶ್‌ ಶೆಟ್ಟಿ ಶ್ರದ್ಧಾಂಜಲಿ ಸಭೆಯಲ್ಲಿ ದ್ವೇಷ ಭಾಷಣ | ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ಎಫ್‌ಐಆರ್‌

ಜನಪ್ರತಿನಿಧಿ (ಮಂಗಳೂರು) : ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದ ಮೇಲೆ ಆರ್‌ ​ಎಸ್ ಎಸ್​ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಜಪೆಯಲ್ಲಿ ಹತ್ಯೆಗೊಳಗಾದ ರೌಡಿ ಶೀಟರ್ ಸುಹಾಸ್ ಶೆಟ್ಡಿ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಸಮಾಜದ ಸ್ವಾಸ್ತ್ಯ ಕೆಡುವಂತೆ, ಮತೀಯ ಗುಂಪುಗಳ ನಡುವೆ ವೈಮನಸ್ಸು ಉಂಟು ಮಾಡುವಂತೆ, ಪ್ರಚೋದನಾತ್ಮಕವಾಗಿ ಹೇಳಿಕೆ ನೀಡಿದ ಆರೋಪದ ಮೇಲೆ‌ ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.

ಬಂಟ್ವಾಳ ತಾಲ್ಲೂಕಿನ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ಮೇ 12 ರಂದು ಶ್ರದ್ಧಾಂಜಲಿ ಕಾರ್ಯಕ್ರಮ ನಡೆದಿತ್ತು. ಸುಮಾರು 500 ಜನ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ ಕಲ್ಲಡ್ಕ ಪ್ರಭಾಕರ್ ಭಟ್ ಸಮಾಜದ ಸ್ವಾಸ್ತ್ಯ ಕದಡುವಂತೆ, ಮತೀಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾತ್ಮಕವಾಗಿ ಹೇಳಿಕೆಯನ್ನು ನೀಡಿದ್ದಾರೆ ಎನ್ನಲಾಗಿದೆ.

ಈ ಪ್ರಕರಣದ ಬಗ್ಗೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಜೂನ್ 2ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ: 353(2) ಬಿಎನ್​ಎಸ್​ ಪ್ರಕಾರ ಪ್ರಕರಣ ದಾಖಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ದ್ವೇಷ ಭಾಷಣ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಸೂಚನೆ‌‌ ನೀಡಲಾಗಿದ್ದು, ಎಷ್ಟೇ ಪ್ರಭಾವಿಗಳಿದ್ದರೂ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ನಿರ್ದೇಶನ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮೇ 31 ರಂದು ತಿಳಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!