spot_img
Tuesday, March 17, 2026
spot_img

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಸಿ ಎ / ಸಿ ಎಸ್ ಮಾಹಿತಿ ಕಾರ್ಯಾಗಾರ

ಕುಂದಾಪುರ : ಜೂನ್ 2ರಂದು ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಸಿ.ಎ / ಸಿ.ಎಸ್ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ವಿದ್ಯಾರ್ಥಿಗಳಿಗೆ ಚಾರ್ಟರ್ಡ್ ಅಕೌಂಟೆಂಟ್ ಎಂದರೇನು?, ಸಿ‌ಎ / ಸಿ‌ಎಸ್ ಪಠ್ಯ ಕ್ರಮ, ಶೈಕ್ಷಣಿಕ ಅರ್ಹತೆ, ವಿವಿಧ ಹಂತಗಳ
ಬಗ್ಗೆ ಹಾಗೆಯೇ ಸಿ ಎ ಎನ್ನುವುದು ಕಠಿಣ ವಲ್ಲ, ಅದನ್ನು ಸವಾಲಾಗಿ ಸ್ವೀಕರಿಸಿದರೆ ಮೊದಲ ಪ್ರಯತ್ನದಲ್ಲಿಯೇ ಯಶಸ್ಸು ಸಾಧಿಸಬಹುದು ಎಂದು ಪ್ರೊ.ಅಲ್ಬನ್ ಅಂಟನಿ ಪಿರೇರಾ ಮಾಹಿತಿ ನೀಡಿದರು.

ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಲತಾ ಪೈ ಉಪಸ್ಥಿತರಿದ್ದರು.

ವಾಣಿಜ್ಯ ಶಾಸ್ತ್ರ ಉಪನ್ಯಾಸಕ ನಾಗೇಶ್ ಸ್ವಾಗತಿಸಿ, ಸಂಖ್ಯಾ ಶಾಸ್ತ್ರ ಉಪನ್ಯಾಸಕಿ ವಿದ್ಯಾಶ್ರೀ ಅತಿಥಿಗಳನ್ನು ಪರಿಚಯಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಶಿವರಂಜನಿ ವಂದಿಸಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ನಿಧಿ ಕಾರ್ಯಕ್ರಮ ನಿರೂಪಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!