spot_img
Tuesday, March 17, 2026
spot_img

ಆಲೂರು ಜ್ಞಾನವಿಕಾಸ ಕೇಂದ್ರದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಮಾಹಿತಿ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕುಂದಾಪುರ ತಾಲೂಕು, ಚಿತ್ತೂರು ವಲಯದ ಆಲೂರು ಕಾರ್ಯಕ್ಷೇತ್ರದ ಸಿರಿ ಜ್ಞಾನವಿಕಾಸ ಕೇಂದ್ರದಲ್ಲಿ ಜ್ಞಾನವಿಕಾಸ ಯೂಟ್ಯೂಬ್ ಮಾಹಿತಿಯ ಜೊತೆಗೆ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಕುಂದಾಪುರ ರೋಟರಿ ಕ್ಲಬ್ ಅಧ್ಯಕ್ಷರಾದ ಶೇಖರ್ ಎನ್ ಶೆಟ್ಟಿ ಅವರು ತಂಬಾಕು ಸೇವನೆಯಿಂದ ಬರುವ ಮಾರಕ ರೋಗಗಳ ಬಗ್ಗೆ, ಅದರಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ, ತಂಬಾಕು ಸೇವನೆಯ ವ್ಯಸನವನ್ನು ತ್ಯೇಜಿಸುವ ಮಾರ್ಗೋಪಾಯಗಳು, ಹಾಗೂ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ಕೊಡುವ ಬಗ್ಗೆ ಮಾಹಿತಿಯನ್ನು ನೀಡಿದರು.

ನಮ್ಮ ಭೂಮಿ ಸಂಸ್ಥೆಯ ಕಾರ್ಯಕರ್ತ ನರಸಿಂಹರ ಅವರು ತಂಬಾಕು ಸೇವನೆಯಿಂದ ಹದಿಹರೆಯದ ಜನಾಂಗ ಬಲಿಯಾಗುವ ಬಗ್ಗೆ ಮಾಹಿತಿ ನೀಡಿದರು.

ಗಂಗೊಳ್ಳಿ ಠಾಣೆಯ ಪೊಲೀಸ್ ಚಂದ್ರ .ಪಿ ರವರು ಮಧ್ಯಪಾನ, ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮದಿಂದ ಮಹಿಳೆಯರು ಎದುರಿಸುವ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರದ ಸದಸ್ಯರಾದ ಲಲಿತಾ ವಹಿಸಿದ್ದರು.
ವೇದಿಕೆಯಲ್ಲಿ ಕುಂದಾಪುರ ರೋಟರಿ ಕ್ಲಬ್ ನಿಕಟಪೂರ್ವ ಅಧ್ಯಕ್ಷರಾದ ಸುನಿಲ್ ಶೆಟ್ಟಿ, ಕೇಂದ್ರದ ಸಂಯೋಜಕಿ ಮಾಲತಿ, ಆಲೂರು ಒಕ್ಕೂಟದ ಉಪಾಧ್ಯಕ್ಷೆ ಚಂದ್ರಾವತಿ, ಜ್ಞಾನವಿಕಾಸ ಸಮನ್ವಯಾದಿಕಾರಿ ರೇಣುಕಾ ಕೋಡಪದವು, ಸೇವಾ ಪ್ರತಿನಿಧಿ ಚಂದ್ರಮತಿ, ಜ್ಞಾನವಿಕಾಸ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!