spot_img
Tuesday, March 17, 2026
spot_img

ನಾಡ, ಹೇರೂರು ಹಾಗೂ ಹೊಸಂಗಡಿ ಗ್ರಾಮದಲ್ಲಿ ಆರೋಗ್ಯ ಕೇಂದ್ರ ಸ್ಥಾಪನೆ-ಶಾಸಕ ಗುರುರಾಜ ಗಂಟಿಹೊಳೆ

ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆರೋಗ್ಯ ಕ್ಷೇತ್ರವನ್ನು ಬಲ ವರ್ಧನೆ ಮಾಡುವ ನಿಟ್ಟಿನಲ್ಲಿ 2023-24ನೇ ಸಾಲಿನಲ್ಲಿ 15 ನೇ ಹಣಕಾಸು ಆಯೋಗದಡಿ ರಾಜ್ಯದ ಆರೋಗ್ಯ ವಲಯದ ಕಾರ್ಯಕ್ರಮಗಳಿಗೆ ಕೇಂದ್ರ ಸರಕಾರ ಅನುಮೋದನೆ ನೀಡಿದ ಕಾರ್ಯಕ್ರಮಡಿಯಲ್ಲಿ ಬೈಂದೂರಿನ 2 ಕಡೆಯಲ್ಲಿ ಆರೋಗ್ಯ ಕೇಂಗ್ರ ಸ್ಥಾಪನೆಯಾಗಲಿದೆ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ತಿಳಿಸಿದ್ದಾರೆ.

ಬೈಂದೂರು ತಾಲ್ಲೂಕಿನ ನಾಡ,ಹೇರೂರು ಗ್ರಾಮ ಹಾಗೂ ಕುಂದಾಪುರ ತಾಲ್ಲೂಕಿನ ಹೊಸಂಗಡಿ ಗ್ರಾಮದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡಕ್ಕೆ ಸರಕಾರಿ ಜಾಗ ಮಂಜೂರಾತಿ ದೊರಕಿದ್ದು ಶೀಘ್ರದಲ್ಲೇ 1.95 ಕೋಟಿ ವೆಚ್ಚದಲ್ಲಿ 3 ಕಡೆ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಶಾಸಕರು ಮಾಹಿತಿ ನೀಡಿದ್ದಾರೆ.

ಬೈಂದೂರು ತಾಲೂಕು ನಾಡ ಗ್ರಾಮದ ಸರ್ವೇ ನಂಬ್ರ 185 ರಲ್ಲಿ 0.05 ಎಕ್ರೆ ಹಾಗೂ ಹೇರೂರು ಗ್ರಾಮದ ಸರ್ವೇ ನಂಬ್ರ 83 ರಲ್ಲಿ 0.10 ಎಕ್ರೆ ಜಾಗ ಮತ್ತು ಕುಂದಾಪುರ ತಾಲೂಕು ಹೊಸಂಗಡಿ ಗ್ರಾಮದ ಸರ್ವೇ ನಂಬ್ರ 49/1 ರಲ್ಲಿ 0.29 ಎಕ್ರೆ ವಿಸ್ತೀರ್ಣ ಜಾಗವನ್ನು ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಉದ್ದೇಶಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಸರಿಗೆ ಮಂಜೂರುಗೊಳಿಸಲಾಗಿದ್ದು, ಶೀಘ್ರವೇ ಕಾಮಗಾರಿ ಆರಂಭವಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!