spot_img
Friday, January 30, 2026
spot_img

ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್: ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

ಕಿರಿಮಂಜೇಶ್ವರ: ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಗಣಹೋಮ ಮತ್ತು ವಿದ್ಯಾ ಸರಸ್ವತಿ ಹೋಮದೊಂದಿಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವು ಜೂನ್ 2ರಂದು ನೆರವೇರಿತು. ಪುಟಾಣಿ ಮಕ್ಕಳನ್ನು ಭವ್ಯ ಮೆರವಣಿಗೆ ಮೂಲಕ ಶಾಲೆಗೆ ಬರಮಾಡಿಕೊಳ್ಳಲಾಯಿತು.

ಶಾಲಾ ಪ್ರಾರಂಭೋತ್ಸವವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ್ ಮೊಗವೀರ ಅವರು ಶಿಕ್ಷಣ ಕೇವಲ ನಾಲ್ಕು ಗೋಡೆಯ ನಡುವಿನ ಪಾಠ ಪ್ರವಚನಕ್ಕೆ ಸೀಮಿತವಾಗಿರದೆ ಮಕ್ಕಳನ್ನು ಕ್ರೀಡೆ ಸಾಂಸ್ಕೃತಿಕ ರಂಗದಲ್ಲಿಯೂ ಸಜ್ಜುಗೊಳಿಸುವ ಪಣತೊಟ್ಟಿದ್ದೇವೆ, ವಿದ್ಯಾರ್ಥಿಗಳಿಗೆ ಬೇಕಾದ ಇಂಗ್ಲೀಷ್ ಸಂವಹನ ಕೌಶಲ್ಯವನ್ನು ಉತ್ತಮಗೊಳಿಸಲು ಬೇಕಾದ ತರಬೇತಿಯನ್ನು ನಮ್ಮ ಶಾಲೆಯಲ್ಲಿ ನೀಡಲಾಗುತ್ತಿದೆ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಿಷ್ಣುಮೂರ್ತಿ ಐತಾಳ್ ಅವರು ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಸನ್ನಡತೆಯನ್ನು ಬೆಳೆಸಿಕೊಂಡು ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳಿ ಎಂದರು.

ಮುಖ್ಯಶಿಕ್ಷಕಿ ದೀಪಿಕಾ ಆಚಾರ್ಯ ಸ್ವಾಗತಿಸಿ, ವಿದ್ಯಾರ್ಥಿಗಳು ಹಿಂದಿನ ವರ್ಷ ಸಾಧಿಸಲಾಗದ ವಿಷಯಗಳನ್ನು ಈ ವರ್ಷ ಸಾಧಿಸಲು ಬೇಕಾದ ಗುರಿಯನ್ನು ಇಟ್ಟುಕೊಂಡು ಸಿಕ್ಕ ಅವಕಾಶಗಳನ್ನು ಸರಿಯಾಗಿ ಉಪಯೋಗಿಸಿಕೊಂಡು ಯಶಸ್ಸು ಪಡೆಯಿರಿ ಎಂದು ಶುಭ ಹಾರೈಸಿದರು.

ಈ ಕಾರ್ಯಕ್ರಮದ ಸಲುವಾಗಿ ಬೋಧಕ ವರ್ಗದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೆಯೇ ವಿದ್ಯಾರ್ಥಿಗಳಿಗೋಸ್ಕರ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು.
ಶಿಕ್ಷಕರಾದ ಸುಬ್ರಹ್ಮಣ್ಯ ಮರಾಟಿ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!