spot_img
Monday, March 16, 2026
spot_img

ಉಡುಪಿ | ಕೋವಿಡ್‌ ಸೋಂಕು ದೃಢಪಟ್ಟಿದ್ದ ವ್ಯಕ್ತಿ ಸಾವು : ಮೃತರ ಮನೆಗೆ ತಹಶೀಲ್ದಾರ್‌ ಭೇಟಿ

ಜನಪ್ರತಿನಿಧಿ (ಶಿರ್ವ) : ಕೋವಿಡ್‌ ಸೋಂಕು ದೃಢಪಟ್ಟಿದ್ದ ಕಾಪು ತಾಲೂಕಿನ ಬೆಳ್ಳೆ ಗ್ರಾಮದ ಪೀಟರ್‌ ಮಥಾಯಸ್‌ (65) ಅವರು ನಿನ್ನೆ(ಸೋಮವಾರ, ಜೂನ್.2) ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕಾಪು ತಹಶೀಲ್ದಾರ್‌ ಡಾ. ಪ್ರತಿಭಾ ಆರ್.‌ ಅವರು ಜೂ.3ರ ಮಂಗಳವಾ ಅವರ ಮನೆಗೆ ಭೇಟಿ ನೀಡಿ ಮನೆಯವರ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದ್ದಾರೆ.

ಮನೆಯವರಿಗೆ ಯಾರಿಗೂ ಕೋವಿಡ್‌ ಸೋಂಕಿನ ಲಕ್ಷಣಗಳು ಕಂಡು ಬಂದಿಲ್ಲ. ಮೃತರ ಶವ ಆಸ್ಪತ್ರೆಯಲ್ಲಿಯೇ ಇದ್ದು. ಜೂ.06ರಂದು ಮೃತರ ಅಂತ್ಯ ಸಂಸ್ಕಾರ ಏರ್ಪಡಿಸಲಾಗುವುದು. ಕೋವಿಡ್‌ ಮಾರ್ಗಸೂಚಿ ಅನುಸರಿಸಿ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದು ತಹಶೀಲಲ್ದಾರರು ಮಾಹಿತಿ ನೀಡಿದ್ದಾರೆ.

ಮೃತರ ಕರುಳಿನ ಕ್ಯಾನ್ಸರ್‌ ನಿಂದ ಬಳಲುತ್ತಿದ್ದರು. ಮೇ.29ರಂದು ಹೈಪರ್‌ ಟೆನ್ಷನ್‌ ಚಿಕಿತ್ಸೆಗಾಗಿ ಆಸ್ಪತ್ರೆಗಾಗಿ ದಾಖಲಾಗಿದ್ದರು. ಅಲ್ಲಿ ಕೋವಿಡ್‌ ಸೋಂಕು ಪರೀಕ್ಷೆ ಮಾಡಿದಾಗ ಸೋಂಕು ದೃಢಪಟ್ಟಿದ್ದು, ನಿನ್ನೆ(ಸೋಮವಾರ) ಮೃತಪಟ್ಟಿದ್ದಾರೆ.

ತಹಶೀಲ್ದಾರರೊಂದಿಗೆ ವೈದ್ಯರು, ಆಶಾ ಕಾರ್ಯಕರ್ತೆಯರು ಮೃತರ ಮನೆಗೆ ಭೇಟಿ ನೀಡಿ ವಿಷಯ ತಿಳಿಸುವುದರ ಜೊತೆಗೆ ಗ್ರಾಮಸ್ಥರಿಗೂ ಕೋವಿಡ್‌ ಸೋಂಕಿನ ಬಗ್ಗೆ ಮುನ್ನೆಚ್ಚರಿಕೆ ನೀಡಿದರು. ಕೋವಿಡ್‌ ಮಾರ್ಗಸೂಚಿಗಳನ್ನು ಅನುಸರಿಸುವಂತೆ ತಿಳಿಸಿದರು.

ಕಾಪು ತಾಲೂಕು ವೈದ್ಯಾಧಿಕಾರಿ ಡಾ. ವಾಸುದೇವ್‌ ಸೇರಿ ಪ್ರಮುಖರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!