spot_img
Friday, January 30, 2026
spot_img

ಆರ್.ಸಿ.ಬಿ ಆಟಗಾರರಿಗೆ ರಾಜ್ಯದ ಜನತೆಯ ಪರವಾಗಿ ರಾಜ್ಯ ಸರ್ಕಾರದಿಂದ ಗೌರವ | ವಿಜಯೋತ್ಸವ ಮೆರವಣಿಗೆ ಇಲ್ಲ

ಜನಪ್ರತಿನಿಧಿ (ಬೆಂಗಳೂರು) : ನಿನ್ನೆಯ ಐಪಿಎಲ್‌ ಫೈನಲ್‌ ಪಂದ್ಯದಲ್ಲಿ ಭರ್ಜರಿ ಜಯಗಳಿಸಿ ತವರೂರಿಗೆ ಆಗಮಿಸುತ್ತಿರುವ ಕರ್ನಾಟಕದ ಹೆಮ್ಮೆಯ ಆರ್.ಸಿ.ಬಿ ತಂಡವನ್ನು ಸಮಸ್ತ ಕನ್ನಡಿಗರ ಪರವಾಗಿ ಇಂದು(ಬುಧವಾರ) ಸಂಜೆ 4 ಗಂಟೆಗೆ ವಿಧಾನಸೌಧದ ಭವ್ಯ ಮೆಟ್ಟಲುಗಳ ಮೇಲೆ ರಾಜ್ಯ ಸರ್ಕಾರ ಅಭಿನಂದಿಸಿ ಗೌರವಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಆರ್.ಸಿ.ಬಿ ಆಟಗಾರರನ್ನು ಸಮಸ್ತ ಕನ್ನಡಿಗರ ಪರವಾಗಿ ಸಿಎಂ ಸಿದ್ದರಾಮಯ್ಯ ಅವರು ಅಭಿನಂದಿಸಿ ಗೌರವಿಸಲಿದ್ದಾರೆ. ಕೋಟ್ಯಂತರ ಅಭಿಮಾನಿಗಳ 18 ವರ್ಷಗಳ ಕಾತುರ, ಕಾಯುವಿಕೆ ಕೊನೆಗೊಂಡು, ಇಡೀ ರಾಜ್ಯದಲ್ಲೇ ಹಬ್ಬದ ವಾತಾವರಣ ಸೃಷ್ಟಿಸಿದ ಈ ಐತಿಹಾಸಿಕ ಗೆಲುವಿನ ಸಂಭ್ರಮದಲ್ಲಿ ನೀವೂ ಭಾಗಿಯಾಗಿ ಎಂದು ಸಿಎಂ ಅವರು ತಮ್ಮ ಅಧಿಕೃತ ಸಾಮಾಜಿಕ ಜಾತತಾಣಗಳ ಮೂಲಕ ಆರ್.ಸಿ.ಬಿ ಅಭಿಮಾನಿಗಳನ್ನು ಸ್ವಾಗತಿಸಿದ್ದಾರೆ.

ಭದ್ರತೆಯ ದೃಷ್ಟಿಯಿಂದ ವಿಜಯೋತ್ಸವ ಮೆರವಣಿಗೆ ಇಲ್ಲ :

ಈ ಬಾರಿಯ ಐಪಿಎಲ್ -2025ನಲ್ಲಿ ಕಪ್ ಗೆದ್ದು ಬೀಗುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡ ಇನ್ನು ಕೆಲವೇ ಹೊತ್ತಿನಲ್ಲಿ ಬೆಂಗಳೂರಿಗೆ ಆಗಮಿಸಲಿದೆ.

ಸಂಜೆ 6 ಗಂಟೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿಮಾನಿಗಳೊಂದಿಗೆ ಆರ್ ಸಿಬಿ ಆಟಗಾರರ ಸಂಭ್ರಮಾಚರಣೆ ನಡೆಯಲಿದೆ. ಅದಕ್ಕೂ ಮೊದಲು ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ತಂಡದ ಆಟಗಾರರ ವಿಜಯೋತ್ಸವ ಮೆರವಣಿಗೆಯನ್ನು ನಡೆಸುವುದೆಂದು ತೀರ್ಮಾನವಾಗಿತ್ತು.

ಆದರೆ ವಿಜಯೋತ್ಸವ ಮೆರವಣಿಗೆ ಕೊನೆಕ್ಷಣದಲ್ಲಿ ರದ್ದಾಗಿದೆ. ತೆರೆದ ವಾಹನದಲ್ಲಿ ಆರ್​ಸಿಬಿ ಆಟಗಾರರ ಮೆರವಣಿಗೆ ಇಲ್ಲ. ಭದ್ರತೆ ದೃಷ್ಟಿಯಿಂದ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ ಎಂದು ಎಂದು ವಿಧಾನಸೌಧದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಆರ್​ಸಿಬಿ ತಂಡದ ಆಟಗಾರರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ಅಭಿನಂದನೆ ಸಲ್ಲಿಸಲಾಗುವುದು. ಈ ವೇಳೆ ಆರ್​ಸಿಬಿ ತಂಡದ ಪರವಾಗಿ ಒಬ್ಬರು ಮಾತನಾಡಲಿದ್ದಾರೆ. ನಂತರ ಎಲ್ಲಾ ಆಟಗಾರರು ಬಸ್​ನಲ್ಲೇ ವಿಧಾನಸೌಧದಿಂದ ಸ್ಟೇಡಿಯಂಗೆ ತೆರಳಲಿದ್ದಾರೆ ಎಂದು ತಿಳಿಸಿದರು.

ಸೀಮಿತ ಪಾರ್ಕಿಂಗ್ ಇರುವುದರಿಂದ ಸಾರ್ವಜನಿಕರು ಮೆಟ್ರೊ ಮತ್ತು ಇತರ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸೂಚಿಸಲಾಗಿದೆ.

ಸಂಭ್ರಮಾಚರಣೆ ವೇಳೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಹೀಗಾಗಿ ಆಟಗಾರರು ಮತ್ತು ಅಭಿಮಾನಿಗಳಿಗೆ ಯಾವುದೇ ತೊಂದರೆ ಆಗಬಾರದು ಎಂದು ಡಿಜಿ&ಐಜಿಪಿ ಸಲೀಂ ಹಾಗೂ ಸಂಚಾರಿ ಜಂಟಿ ಆಯುಕ್ತ ಎಂ ಎನ್ ಅನುಚೇತ್ ಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಮೊದಲೇ ಸವಾರರಿಗೆ ಬೇರೆ ಬೇರೆ ಮಾರ್ಗದ ವ್ಯವಸ್ಥೆ ಮಾಡಿ. ವಿಧಾನಸೌಧ, ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಟ್ರಾಫಿಕ್ ನಿಭಾಯಿಸುವಂತೆ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!