spot_img
Sunday, March 15, 2026
spot_img

ಆರ್.ಸಿ.ಬಿ ವಿಜಯೋತ್ಸವ | ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನೂಕುನುಗ್ಗಲಿಗೆ ಹನ್ನೊಂದು ಮಂದಿ ಬಲಿ, ಹಲವರು ಅಸ್ವಸ್ಥ

ಜನಪ್ರತಿನಿಧಿ (ಬೆಂಗಳೂರು) : 18 ವರ್ಷಗಳ ಬಳಿಕ ಚೊಚ್ಚಲ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಗೆ ಬಂದಿದ್ದ ಹನ್ನೊಂದು ಮಂದಿ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನೂಕುನುಗ್ಗಲಿಗೆ ಸಿಲುಕಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಟ್ರೋಫಿ ಗೆದ್ದ ತಂಡವನ್ನು ಕಣ್ತುಂಬಿಕೊಳ್ಳಲು ನಗರದ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಯುವಕ, ಯುವತಿಯರು ಆಗಮಿಸುತ್ತಿದ್ದು, ಕ್ರೀಡಾಂಗಣದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು, ನೂಕುನುಗ್ಗಲಿನಿಂದ ಹನ್ನೊಂದು ಮಂದಿ ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ಇವರಲ್ಲಿ ಮೂವರ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

18, 19, ಮತ್ತು 20ನೇ ಗೇಟ್ ಓಪನ್ ಆಗುತ್ತಿದ್ದಂತೆ ಅಭಿಮಾನಿಗಳು ಏಕಾಏಕಿ ಒಳನುಗ್ಗಿದ್ದು, ತಳ್ಳಾಟ, ನೂಕುನುಗ್ಗಲು ಉಂಟಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಪರಿಸ್ಥಿತಿ ಕೈಮೀರಿ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಆರ್ ಸಿಬಿ ಆಟಗಾರರು ಆಗಮಿಸುವ ಗೇಟ್ ನಂಬರ್ 12 ರ ಬಳಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದ ವೇಳೆ ಭಾರಿ ನೂಕು ನುಗ್ಗಲು ಉಂಟಾಗಿದೆ. ಈ ವೇಳೆ ಮಹಿಳಾ ಅಭಿಮಾನಿಯೊಬ್ಬರು ಅಸ್ವಸ್ಥಗೊಂಡಿದ್ದು, ಅವರನ್ನು ಕಾರಿನಲ್ಲಿ ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಯಿತು.

ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಅವರಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಇನ್ನೂ ಗೇಟ್ ನಂಬರ್ 6 ರ ಬಳಿ ಯುವಕನೋರ್ವ ಗೇಟ್ ಹತ್ತಲು ಹೋಗಿ ಕಾಲು ಮುರಿದುಕೊಂಡಿರುವುದಾಗಿ ವರದಿಯಾಗಿದೆ. ಭಾರಿ ಜನ ಹಾಗೂ ವಾಹನ ದಟ್ಟಣೆಯಿಂದಾಗಿ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!