spot_img
Monday, March 16, 2026
spot_img

ಆರ್‌.ಸಿ.ಬಿ ವಿಜಯೋತ್ಸವ | ರಾಜ್ಯ ಸರ್ಕಾರದ ವೈಫಲ್ಯ, ಬೇಜವಾಬ್ದಾರಿತನ : ಆರ್‌. ಅಶೋಕ್‌ ಟೀಕೆ

ಜನಪ್ರತಿನಿಧಿ (ಬೆಂಗಳೂರು) : ಐಪಿಎಲ್ ಪಟ್ಟ ಗೆದ್ದಿರುವ ಆರ್ ಸಿಬಿ ತಂಡಕ್ಕೆ ಅಭಿನಂದನೆ ಸಲ್ಲಿಸಿ ಸಂಭ್ರಮಿಸಬೇಕಾದ ಘಳಿಗೆಯನ್ನ ಸೂತಕದ ಘಳಿಗೆ ಮಾಡಿರುವ ಕಾಂಗ್ರೆಸ್ ಸರ್ಕಾರದ ವಿವೇಚನಾರಹಿತ ದುರಾಡಳಿತ ಇವತ್ತು ಅಮಾಯಕ ಜೀವಗಳನ್ನ ಬಲಿ ತೆಗೆದುಕೊಂಡಿದೆ. ಕನ್ನಡಿಗರ ಜನಪ್ರಿಯ ಆರ್ ಸಿಬಿ ತಂಡ ಚಾಂಪಿಯನ್ ಪಟ್ಟ ಗೆದ್ದ ಸಾಧನೆಯಲ್ಲಿ ತಾನೂ ಒಂದಷ್ಟು ಕ್ರೆಡಿಟ್ ಪಡೆಯಬೇಕು ಎನ್ನುವ ಆತುರದಲ್ಲಿ ಸರಿಯಾದ ಪೂರ್ವಸಿದ್ಧತೆ ಇಲ್ಲದೆ, ಯೋಜನೆ ಇಲ್ಲದೆ, ಪೊಲೀಸರಿಗೆ ಕಾಲಾವಕಾಶ ಕೊಡದೆ ಅಭಿನಂದನಾ ಸಮಾರಂಭ ನಡೆಸಲು ರಾಜ್ಯ ಸರ್ಕಾರ ದುಂಬಾಲು ಬಿದ್ದಿದ್ದೆ ಈ ಅನಾಹುತಕ್ಕೆ ಕಾರಣ ಎಂದು ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌ ಟೀಕಿಸಿದ್ದಾರೆ.

ಆರ್‌ ಸಿ ಬಿ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೂಕುನುಗ್ಗಲು ಸಂಭವಿಸಿ ಹನ್ನೊಂದು ಮಂದಿ ಮೃತಪಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆರ್‌ ಅಶೋಕ್‌ ಟೀಕಿಸಿದ್ದಾರೆ.

ಐಪಿಎಲ್ ಪಂದ್ಯಾವಳಿಯ ಫೈನಲ್ ಮ್ಯಾಚ್ ನಿನ್ನೆ ರಾತ್ರಿಯಷ್ಟೇ ಮುಗಿದಿದೆ. ನಿನ್ನೆ ರಾತ್ರಿಯೆಲ್ಲಾ ನಗರದಾದ್ಯಂತ ಕಾನೂನು ಸುವ್ಯವಸ್ಥೆ ಪಾಲನೆ ಮಾಡುವಲ್ಲಿ ನಿರತರಾಗಿದ್ದ ಪೊಲೀಸ್ ಸಿಬ್ಬಂದಿಗೆ ಇವತ್ತು ಬೆಳಿಗ್ಗೆ ಏಕಾಏಕಿ ಮತ್ತೊಮ್ಮೆ ಇಷ್ಟು ದೊಡ್ಡ ಮಟ್ಟದ ಕಾರ್ಯಕ್ರಮಕ್ಕೆ ಭದ್ರತೆ ಒದಗಿಸಿ ಎಂದರೆ ಅದು ಕಷ್ಟಸಾಧ್ಯ ಎನ್ನುವ ಕನಿಷ್ಠ ಪರಿಜ್ಞಾನವೂ ಇಲ್ಲದಿದ್ದಿದ್ದು ಸರ್ಕಾರದ ಸ್ಪಷ್ಟ ವೈಫಲ್ಯ ಮತ್ತು ಅದಕ್ಕಿಂತ ಹೆಚ್ಚಾಗಿ ಬೇಜವಾಬ್ದಾರಿತನ ಎಂದು ಅವರು ಆಕ್ರೋಶ ಹೊರ ಹಾಕಿದ್ದಾರೆ.

ಚಾಂಪಿಯನ್ ಆರ್ ಸಿಬಿ ತಂಡವನ್ನ ಸ್ವಾಗತಿಸಲು, ತಮ್ಮ ನೆಚ್ಚಿನ ಆಟಗಾರರನ್ನು ನೋಡಲು, ಅವರ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಾರೆ ಎನ್ನುವುದನ್ನ ಅಂದಾಜಿಸುವಲ್ಲಿ ಸರ್ಕಾರ ಎಡವಿದೆ ಎನ್ನುವುದು ಸ್ಪಷ್ಟವಾಗಿ ಕಾಣುತ್ತಿದೆ. ಜನ ಸಂದಣಿ ನಿರೀಕ್ಷಿಸಿ ಹೆಚ್ಚಿನ ಕಾಲಾವಕಾಶ ತೆಗೆದುಕೊಂಡು ವಾರಾಂತ್ಯದಲ್ಲಿ ಈ ಕಾರ್ಯಕ್ರಮ ಮಾಡಬಹುದಿತ್ತು ಎನ್ನಿಸುತ್ತಿದೆ. ಈ ಸಾವುಗಳಿಗೆ ರಾಜ್ಯ ಸರ್ಕಾರವೇ ಹೊಣೆ ಹೊತ್ತು ಮೃತರ ಕುಟುಂಬಗಳಿಗೆ 25 ಲಕ್ಷ ಪರಿಹಾರ ನೀಡಬೇಕು. ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಭರಿಸಬೇಕು. ಮೃತ ದುರ್ದೈವಿಗಳ ಕುಟುಂಬಗಳ ದುಃಖದಲ್ಲಿ ಇಡೀ ರಾಜ್ಯವೇ ಭಾಗಿಯಾಗಿದೆ ಎಂದವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!