spot_img
Monday, March 16, 2026
spot_img

ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಐಪಿಎಲ್‌ ಚಾಂಪಿಯನ್ ಆರ್.ಸಿ.ಬಿ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಸನ್ಮಾನ

ಜನಪ್ರತಿನಿಧಿ (ಬೆಂಗಳೂರು) : 18 ವರ್ಷಗಳ ನಂತರ ಮೊದಲ ಬಾರಿ ಐಪಿಎಲ್ ಚಾಂಪಿಯನ್ಸ್ ಆಗಿ ಬೆಂಗಳೂರಿಗೆ ಆಗಮಿಸಿದ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು(ಬುಧವಾರ) ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸನ್ಮಾನಿಸಿ ಗೌರವಿಸಿದರು.

ಗುಜರಾತ್​​ನ ಅಹ್ಮದಾಬಾದ್​​ನಿಂದ ಬೆಂಗಳೂರಿನ ಎಚ್​ಎಎಲ್​ ವಿಮಾನ ನಿಲ್ದಾಣಕ್ಕೆ ಬಂದಿಳಿದ ಆರ್​ಸಿಬಿ ಆಟಗಾರರನ್ನು ಸರ್ಕಾರದ ಪರವಾಗಿ ಖುದ್ದು ಡಿಸಿಎಂ ಡಿಕೆ ಶಿವಕುಮಾರ್ ಅವರೇ ತೆರಳಿ ಸ್ವಾಗತಿಸಿದರು. ನಂತರ ಆರ್​ಸಿಬಿ ಆಟಗಾರರನ್ನು ವಿಶೇಷ ಬಸ್ಸುಗಳಲ್ಲಿ ಖಾಸಗಿ ಹೋಟೆಲ್ ಗೆ ಕರೆದುಕೊಂಡು ಹೋಗಲಾಯಿತು.

ಸಂಜೆ 4:30ಕ್ಕೆ ಖಾಸಗಿ ಹೋಟೆಲ್​ನಿಂದ ಬಸ್​ಗಳಲ್ಲಿ ಆರ್​ಸಿಬಿ ತಂಡ ಗೆದ್ದ ಟ್ರೋಫಿ ಸಮೇತ ವಿಧಾನಸೌಧಕ್ಕೆ ಆಗಮಿಸಿತು. ರಾಷ್ಟ್ರಗೀತೆ ಹಾಗೂ ನಾಡಗೀತೆ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು. ಬಳಿಕ ಸಿಎಂ ಸಿದ್ದರಾಮಯ್ಯ ಅವರು ಎಲ್ಲಾ ಆಟಗಾರರಿಗೆ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಿದರು. ಅಷ್ಟರಲ್ಲೇ ಮಳೆ ಬಂದ ಕಾರಣ ತರಾತುರಿಯಲ್ಲಿ ಕಾರ್ಯಕ್ರಮ ಮುಗಿಸಿ ಆಟಗಾರರನ್ನು ಬಸ್​ನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕಳುಹಿಸಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವರಾದ ಜಮೀರ್ ಅಹ್ಮದ್ ಖಾನ್, ಡಾ.ಎಂ.ಸಿ.ಸುಧಾಕರ್ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು.

https://x.com/ANI/status/1930239581305139459

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!