spot_img
Monday, March 16, 2026
spot_img

ಆರ್.ಸಿ.ಬಿ ವಿಜಯೋತ್ಸವದ ವೇಳೆ ಅವಘಡ : ಸಿಎಂ ಸಿದ್ದರಾಮಯ್ಯ ತೀವ್ರ ಬೇಸರ

ಜನಪ್ರತಿನಿಧಿ (ಬೆಂಗಳೂರು) : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ ಎಂದು ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ಸಿದ್ದರಾಮಯ್ಯ ಸಂತಾಪ ಸೂಚಿಸಿದರು.

ಇಂತಹದ್ದೊಂದು ನೂಕುನುಗ್ಗಲು ನಡೆದು ಜನಸಂದಣಿಯನ್ನು ನಿಯಂತ್ರಣ ಮಾಡಲಾಗದೆ ಅಹಿತಕರ ಘಟನೆ ನಡೆಯಬಹುದೆಂಬ ನಿರೀಕ್ಷೆಯಿಂದಲೇ ತಂಡದ ವಿಜಯಯಾತ್ರೆಗೆ ಅವಕಾಶ ನೀಡದೆ ಮುಂಜಾಗ್ರತೆ ವಹಿಸಲಾಗಿತ್ತು. ಹೀಗಿದ್ದರೂ ಕ್ರೀಡಾಂಗಣದ ಬಳಿ ಜನ ಕಿಕ್ಕಿರಿದು ಸಾಗರದಂತೆ ಸೇರಿದ್ದ ಕಾರಣ ನೂಕುನುಗ್ಗಲು ನಡೆದು ಕಾಲ್ತುಳಿತದಿಂದ ಈ ಅವಘಡ ಸಂಭವಿಸಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ಪ್ರೀತಿ – ಅಭಿಮಾನ ಈ ಎಲ್ಲಕ್ಕಿಂತ ಜೀವ ಮುಖ್ಯ ಎನ್ನುವುದನ್ನು ಅರ್ಥ ಮಾಡಿಕೊಂಡು, ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕೆಂದು ಸಾರ್ವಜನಿಕರಲ್ಲಿ ಅವರು ಮನವಿ ಮಾಡಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!