spot_img
Monday, March 16, 2026
spot_img

ಹಿರಿಯ ಹೋಟೆಲ್ ಉದ್ಯಮಿ ಸುರೇಶ ಎಸ್ ಪೂಜಾರಿ ಪಡುಕೋಣೆ ಇನ್ನಿಲ್ಲ

ಕುಂದಾಪುರ: ಪ್ರಸಿದ್ಧ ಹೋಟೆಲ್ ಉದ್ಯಮಿ, ಹೋಟೆಲ್ ಉದ್ಯಮದಲ್ಲಿ ರಾಷ್ಟ್ರದ ಗಮನವನ್ನು ಸೆಳೆದ ಸುಖ್ ಸಾಗರ ಹೋಟೆಲ್ ರೂವಾರಿ ಪಡುಕೋಣೆ ಸುರೇಶ್ ಎಸ್. ಪೂಜಾರಿ (87 ವ) ಜೂನ್ 4-2025 ರಂದು ಮುಂಬಯಿಯಲ್ಲಿ ನಿಧನರಾದರು.

ಇವರು ಪತ್ನಿ, ಮೂವರು ಗಂಡು ಮಕ್ಕಳನ್ನು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಹೋಟೆಲ್ ಉದ್ಯಮದಲ್ಲಿ ನೂರಾರು ಮಂದಿಗೆ ಮಾಗದರ್ಶಕರಾಗಿ ಅವರ ಬೆಳವಣಿಗೆಗೆ ಸದಾ ಪ್ರೋತ್ಸಾಹ ನೀಡುತ್ತಿದ್ದ ಸುರೇಶ್ ಪೂಜಾರಿಯವರು ಸಾಮಾಜಿಕ, ಧಾರ್ಮಿಕ ಕಾರ್ಯಗಳಿಗೆ ಕೊಡುಗೈ ದಾನಿಯಾಗಿದ್ದರು.

ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರದ ಗೌರವಾಧ್ಯಕ್ಷರಾಗಿ, .ಶ್ರೀ ನಾರಾಯಣಗುರು ಏಜ್ಯುಕೇಶನಲ್ & ಕಲ್ಚರಲ್ ಟ್ರಸ್ಟ್ (ರಿ) ಕುಂದಾಪುರದ ಅಧ್ಯಕ್ಷರಾಗಿ ಕಳೆದ 35 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದರು. 35 ವರ್ಷಗಳ ಹಿಂದೆಯೇ ಕುಂದಾಪುರದಲ್ಲಿ ಶ್ರೀ ನಾರಾಯಣಗುರು ಕಲ್ಯಾಣ ಮಂಟಪವನ್ನು ನಿರ್ಮಿಸುವಲ್ಲಿ ಮುಂಚೂಣಿಯಲ್ಲಿ ನಿಂತಿದ್ದರು. ಬಿಲ್ಲವ ಸಂಘದ ಮೂಲಕ ವಿಧ್ಯಾರ್ಥಿ ವೇತನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು.

ಮೃತರ ಅಂತ್ಯಕ್ರಿಯೆ ಅವರ ಹುಟ್ಟೂರಿನಲ್ಲಿ ಇಂದು (ಜೂನ್ 5) ನಡೆಯಲಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!