spot_img
Monday, March 16, 2026
spot_img

ಅರಸು ರಾಜಕೀಯದಲ್ಲಿ ಅವಕಾಶ ಸಿಗದ ಜನಾಂಗದವರಿಗೆ ಪ್ರಾತಿನಿಧ್ಯ ದೊರಕಿಸಿಕೊಟ್ಟವರು : ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ರಾಜ್ಯ ಕಂಡಂತಹ ಮುತ್ಸದ್ದಿ ರಾಜಕಾರಣಿಗಳಲ್ಲಿ ಒಬ್ಬರು. ಬಡವರು, ತುಳಿತಕ್ಕೊಳಗಾದವರು, ಅವಕಾಶಗಳಿಂದ ವಂಚಿತರಾದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದವರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸುರವರ 43ನೇ ಪುಣ್ಯಸ್ಮರಣೆ ಅಂಗವಾಗಿ ಇಂದು ವಿಧಾನಸೌಧ ಆವರಣದಲ್ಲಿರುವ ಅರಸುರವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ನಂತರ ಮಾಧ್ಯಮದವರೊಂದಿಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ದಿವಂಗತ ದೇವರಾಜ ಅರಸು ಅವರ ಪುಣ್ಯತಿಥಿಯಂದು  ಸರ್ಕಾರ ಹಾಗೂ ಏಳು ಕೋಟಿ ಕನ್ನಡಿಗರ ವತಿಯಿಂದ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಿ ಸಿಎಂ ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರನ್ನು ಸ್ಮರಿಸಿಕೊಂಡರು.

ಅರಸು ಅವರಿಂದಾಗಿ ಬಡತನ ನಿರ್ಮೂಲನೆ ಕಾರ್ಯಕ್ರಮ ಕರ್ನಾಟಕದಲ್ಲಿ ಅಚ್ಚುಕಟ್ಟಾಗಿ ನೆರವೇರಿತು. ರಾಜಕೀಯದಲ್ಲಿ ಅವಕಾಶ ಸಿಗದ ಜನಾಂಗದವರಿಗೆ ಪ್ರಾತಿನಿಧ್ಯ ದೊರಕಿಸಿಕೊಟ್ಟರು. ಹಾವನೂರು ಆಯೋಗವನ್ನು ರಚನೆ ಮಾಡಿ, ಅದರ ವರದಿ ಪಡೆದು ಜಾರಿ ಮಾಡಿ ಉದ್ಯೋಗದಲ್ಲಿ ಮೀಸಲಾತಿ ಕೊಟ್ಟರು. ಸಾಮಾಜಿಕ ನ್ಯಾಯದಲ್ಲಿ ಬಲವಾದ ನಂಬಿಕೆ ಇಟ್ಟ ದೇವರಾಜ ಅರಸು ಅವರು ನಿರ್ಗತಿಕರು, ಭೂ ರಹಿತರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದರು. ಉಳುವವನೇ ಭೂಮಿಯ ಒಡೆಯ ಕಾನೂನು ಜಾರಿ ಮಾಡಿ ಭೂರಹಿತರನ್ನು ಭೂ ಒಡೆಯರಾಗಿಸಿದರು. ಜೀತ ಪದ್ಧತಿಯನ್ನು ರದ್ದು ಮಾಡಿ, ಮಲ ಹೊರುವ ಪದ್ಧತಿಯನ್ನು ನಿಲ್ಲಿಸಿದರು. ಅವರ ಕಾರ್ಯಕ್ರಮಗಳ ಉದ್ದನೆಯ ಪಟ್ಟಿಯೇ ಇದೆ. ದೀರ್ಘ ಕಾಲ ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು ಎಂದರು.

ಮೈಸೂರು ರಾಜ್ಯಕ್ಕೆ 1973 ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಿದ ಮುತ್ಸದ್ದಿ, ಜನಪರವಾದ ಕಾಳಜಿ, ಸಾಮಾಜಿಕ ನ್ಯಾಯದ ಪರವಾಗಿ ಬದ್ಧತೆಯಿರುವ ರಾಜಕಾರಣಿಯನ್ನು ಸರ್ಕಾರ ಸ್ಮರಿಸಿದೆ. ಅವರು ಮಾಡಿರುವ ಕೆಲಸಗಳು ನಮಗೆ ಸ್ಫೂರ್ತಿ ಮತ್ತು ಪ್ರೇರಣೆ. ನಮ್ಮ ಸರ್ಕಾರ ಅವರಿಂದ ಸ್ಪೂರ್ತಿ ಪಡೆದು ಸಾಮಾಜಿಕ ನ್ಯಾಯಾದೆಡೆಗೆ ದೃಢವಾದ ಹೆಜ್ಜೆಗಳನ್ನು ಇರಿಸಿದ್ದೇವೆ. ಅದೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!