spot_img
Monday, March 16, 2026
spot_img

ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ 

ಕುಂದಾಪುರ: ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಂರಕ್ಷಾ ಇಕೋ ಕ್ಲಬ್,  ಮತದಾರರ ಸಾಕ್ಷರತಾ ಸಂಘ ಮತ್ತು ಕಾಲೇಜಿನ ರೇಂಜರ್ಸ್ ಘಟಕ ಜಂಟಿಯಾಗಿ ವಿಶ್ವ ಪರಿಸರ ದಿನವನ್ನು ಆಚರಿಸಿತು ಕಾಲೇಜಿನ ಪ್ರಾಂಶುಪಾಲರು ಗಿಡಕ್ಕೆ ನೀರೆರೆಯುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ  ರಾಮಕೃಷ್ಣ ಬಿ.ಜಿ. ಯವರು ವಹಿಸಿದ್ದರು. ಸಂರಕ್ಷ ಇಕೋ ಕ್ಲಬ್ಬಿನ ಸಂಚಾಲಕರಾದ ಶ್ರೀ ಸುಬ್ರಹ್ಮಣ್ಯರವರು  ವಿಶ್ವ ಪರಿಸರ ದಿನದ ಮಹತ್ವವನ್ನು ಸಾರುತ್ತ , ಈಗಿರುವ ಭೂಮಿಗಿಂತ ಇನ್ನು ಸುಂದರವಾದ ಸ್ವಚ್ಚವಾದ ಭೂಮಿಯನ್ನು ನಮ್ಮ ಮುಂದಿನ ಜನಾಂಗಕ್ಕೆ ನಾವು ನೀಡಬೇಕಾಗಿದೆ ಎಂದರು.
 ಇ ಎಲ್ ಸಿ ಕ್ಲಬ್ ನ ಸಂಚಾಲಕರಾದ ಶ್ರೀಮತಿ ಸಂಧ್ಯಾ ನಾಯಕ್  ಪ್ರಾಸ್ತಾವಿಕ ನುಡಿಗಳನ್ನಾಡಿದರು. ಅರ್ಥಶಾಸ್ತ್ರ ಉಪನ್ಯಾಸಕರಾದ ಶ್ರೀ ದಿನಕರ್ ಶೆಟ್ಟಿ ನಿರೂಪಿಸಿದರು. ಹಿರಿಯ ಉಪನ್ಯಾಸಕರಾದ ಶ್ರೀ ಚಂದ್ರಶೇಖರ್ ವಂದಿಸಿದರು. ಈ ಸಂದರ್ಭದಲ್ಲಿ ಇತಿಹಾಸ ಉಪನ್ಯಾಸಕರಾದ ಶ್ರೀಮತಿ ಪೂರ್ಣಿಮಾ ನಾಯಕ್ , ಕಾಲೇಜಿನ ರೇಂಜರ್ಸ್ ತಂಡ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ನಂತರ ರೇಂಜರ್ಸ್ ಗಳು ಮತ್ತು ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಗಿಡಗಳನ್ನು ನೆಟ್ಟರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!