spot_img
Monday, March 16, 2026
spot_img

ಕೃಷಿಪತ್ತಿನ ನೌಕರರ ಒಕ್ಕೂಟದ ವತಿಯಿಂದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುರೇಶ್ ಪೂಜಾರಿ ಅವರಿಗೆ ಸನ್ಮಾನ

ಕುಂದಾಪುರ: ಕುಂದಾಪುರ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ನೌಕರರ ಒಕ್ಕೂಟದ ವತಿಯಿಂದ ಜೂ. 6ರಂದು ನಡೆದ 20 ಅಂಶಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮೇ31ರಂದು ಸೇವಾ ನಿವೃತ್ತರಾದ ಹೆಮ್ಮಾಡಿ ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸುರೇಶ್ ಪೂಜಾರಿಯವರನ್ನು ಸನ್ಮಾನಿಸಲಾಯಿತು.

ಸಭೆಯಲ್ಲಿ ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರಾದ ಶ್ರೀಮತಿ ಲಾವಣ್ಯ.ಕೆ.ಆರ್ ಹಾಗೂ ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಕುಂದಾಪುರ ಶ್ರೀಮತಿ ಸುಕನ್ಯಾ ಮತ್ತು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಎ.ಜಿ.ಎಮ್ ವಿಶ್ವನಾಥ ಶೆಟ್ಟಿ ಇವರು ನಿವೃತ್ತರಿಗೆ ಶುಭ ಕೋರಿದರು.

ಕುಂದಾಪುರ ತಾಲೂಕು ಪ್ರಾಥಮಿಕ ಕೃಷಿಪತ್ತಿನ ನೌಕರರ ಸಂಘದ ಅಧ್ಯಕ್ಷರಾದ ವಿಶ್ವೇಶ್ವರ ಐತಾಳ್, ವಲಯ ಮೇಲ್ವಿಚಾರಕರಾದ ಸಂದೀಪ ಶೆಟ್ಟಿ, ಚಂದ್ರಶೇಖರ ಶೆಟ್ಟಿ ಉಪಸ್ಥಿತರಿದ್ದರು.

ವಲಯ ಮೇಲ್ವಿಚಾರಕರಾದ ಶಿವರಾಮ ಪೂಜಾರಿ ಪ್ರಾಸ್ತಾವಿಕ ಮಾತನಾಡಿದರು. ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಕೀರ್ತಿಕುಮಾರ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!