spot_img
Tuesday, March 17, 2026
spot_img

ವಿಶ್ವದ ಅತಿ ಎತ್ತರದ ಚೆನಾಬ್ ಕಮಾನು ರೈಲ್ವೆ ಸೇತುವೆ : ಪ್ರಧಾನಿ ನಮೋ ಉದ್ಘಾಟನೆ

ಜನಪ್ರತಿನಿಧಿ (ಜಮ್ಮು ಕಾಶ್ಮೀರ) : ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆಯಾದ ಚೆನಾಬ್ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು (ಶುಕ್ರವಾರ) ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಸಿಎಂ ಒಮರ್ ಅಬ್ದುಲ್ಲಾ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಕೂಡ ಉಪಸ್ಥಿತರಿದ್ದರು.

ಚೆನಾಬ್ ಸೇತುವೆಯ ನಂತರ, ಜಮ್ಮು- ಕಾಶ್ಮೀರದಲ್ಲಿ ಅಂಜಿ ನದಿಯ ಮೇಲೆ ನಿರ್ಮಿಸಲಾದ ದೇಶದ ಮೊದಲ ಕೇಬಲ್-ಸ್ಟೇಡ್ ರೈಲು ಸೇತುವೆ ಇದಾಗಿದೆ. ಈ ಕಾರ್ಯಕ್ರಮ ನಂತರ ಪ್ರಧಾನಿಯವರು ಕತ್ರಾದಿಂದ ಶ್ರೀನಗರಕ್ಕೆ ಉಧಂಪುರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕ (USBRL) ದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಹಸಿರು ನಿಶಾನೆ ತೋರಲಿದ್ದಾರೆ.

ನದಿಯಿಂದ 359 ಮೀಟರ್ ಎತ್ತರದಲ್ಲಿರುವ ವಾಸ್ತುಶಿಲ್ಪದ ಅದ್ಭುತ ಚೆನಾಬ್ ರೈಲು ಸೇತುವೆಯು ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆಯಾಗಿದೆ. ಇದು ಭೂಕಂಪ ಮತ್ತು ಪ್ರಬಲ ಗಾಳಿಯ ಪರಿಸ್ಥಿತಿಗಳನ್ನು ತಡೆದುಕೊಳ್ಳುವಂತೆ ವಿನ್ಯಾಸಗೊಳಿಸಲಾದ 1,315 ಮೀಟರ್ ಉದ್ದದ ಉಕ್ಕಿನ ಕಮಾನು ಸೇತುವೆಯಾಗಿದೆ. ಇದು ಜಮ್ಮು-ಶ್ರೀನಗರ ನಡುವಿನ ಸಂಪರ್ಕವನ್ನು ಹೆಚ್ಚಿಸುವುದು.

ಸೇತುವೆಯ ಮೇಲೆ ಚಲಿಸುವ ವಂದೇ ಭಾರತ್ ರೈಲು ಮೂಲಕ, ಕತ್ರಾ ಮತ್ತು ಶ್ರೀನಗರ ನಡುವೆ ಪ್ರಯಾಣಿಸಲು ಕೇವಲ 3 ಗಂಟೆಗಳು ಬೇಕಾಗುತ್ತದೆ, ಇದು ಈಗಿನ ಪ್ರಯಾಣದ ಸಮಯವನ್ನು 2-3 ಗಂಟೆಗಳಷ್ಟು ಕಡಿಮೆ ಮಾಡುತ್ತದೆ.

272 ಕಿಮೀ ಉದ್ದದ ಉಧಂಪುರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕ (USBRL) ಯೋಜನೆಯನ್ನು ಪ್ರಧಾನ ಮಂತ್ರಿಗಳು ರಾಷ್ಟ್ರಕ್ಕೆ ಅರ್ಪಿಸಲಿದ್ದು, ಇದರ ಜೊತೆಗೆ ಶ್ರೀ ಮಾತಾ ವೈಷ್ಣೋ ದೇವಿ ಕತ್ರಾದಿಂದ ಶ್ರೀನಗರಕ್ಕೆ ಮತ್ತು ಶ್ರೀನರದಿಂದ ಕತ್ರಾಗೆ ಎರಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳನ್ನು ಪ್ರಧಾನ ಮಂತ್ರಿಗಳು ಉದ್ಘಾಟಿಸಲಿದ್ದಾರೆ.

https://x.com/ANI/status/1930877361106420106

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!