spot_img
Tuesday, March 17, 2026
spot_img

ಬೈಂದೂರು ಬಂಟರ ಸಂಘದಿಂದ ಎಸ್.ಎಸ್.ಎಲ್.ಸಿಯಲ್ಲಿ 8ನೇ ರ್‍ಯಾಂಕ್ ಪಡೆದ ಜನ್ನಾಲ್ ರವಿತೇಜ ಶೆಟ್ಟಿಗೆ ಸನ್ಮಾನ

ಕುಂದಾಪುರ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 618 ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ 8ನೇ ಸ್ಥಾನ ಪಡೆದ ಯರುಕೋಣೆ ಸಂತೋಷ್ ಶೆಟ್ಟಿ ಮತ್ತು ಜನ್ನಾಲು ಚಂದ್ರಾವತಿ ಶೆಟ್ಟಿ ದಂಪತಿಗಳ ಪುತ್ರ ಚಿತ್ತೂರು ಪ್ರೌಢ ಶಾಲೆಯ ವಿದ್ಯಾರ್ಥಿ ರವಿತೇಜ ಇವರನ್ನು ಬೈಂದೂರು ಬಂಟರ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಬೈಂದೂರು ಬಂಟರ ಸಂಘದ ಅಧ್ಯಕ್ಷ ಸಾಲ್ಗೆದ್ದೆ ಶಶಿಧರ್ ಶೆಟ್ಟಿ ನೇತೃತ್ವದಲ್ಲಿ ವಿದ್ಯಾರ್ಥಿಯ ಮನೆಗೆ ತೆರಳಿದ ತಂಡದಲ್ಲಿ ಸಂಘದ ಕಾರ್ಯಕಾರಿ ಸದಸ್ಯ, ಕೊಲ್ಲೂರು ದೇವಳದ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಕುದ್ರುಕೊಡು ಜಗದೀಶ ಶೆಟ್ಟಿ ನಗದು ಪುರಸ್ಕಾರ ವಿತರಿಸಿದರು. ಸಂಘದ ಉಪಾಧ್ಯಕ್ಷ ಕರುಣಾಕರ್ ಶೆಟ್ಟಿ ನೆಲ್ಯಾಡಿ, ಸಾಂಸ್ಕೃತಿಕ ಕಾರ್ಯದರ್ಶಿ ವಿಶ್ವನಾಥ ಶೆಟ್ಟಿ ಉಪಸ್ಥಿತರಿದ್ದು ಅಭಿನಂದಿಸಿದರು. ಈ ಸಂದರ್ಭದಲ್ಲಿ ಜನ್ನಾಲು ಶೇಷು ಶೆಟ್ಟಿ ಮತ್ತು ಸಾಧಕ ವಿದ್ಯಾರ್ಥಿ ರವಿತೇಜ ಶೆಟ್ಟಿ ಕುಟುಂಬಸ್ಥರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!